Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಳಮೀಸಲಾತಿ ಶೀಘ್ರ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಒಳಮೀಸಲಾತಿ ಶೀಘ್ರ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾದಿಗ ಸಂಘಟನೆಗಳ ಒಕ್ಕೂಟದಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ | ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು.
ಶುಕ್ರವಾರ ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ಒಕ್ಕೂಟದ ನೂರಾರು ಮುಖಂಡರು, ಯುವಕರು ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಬೇಡಿಕೆ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು.
ನೇತೃತ್ವ ವಹಿಸಿದ್ದ ಯುವ ಮುಖಂಡ ಉಮೇಶ ಕಾರಜೋಳ ಮಾತನಾಡಿ, ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಸಹ ಅನುಮತಿ ನೀಡಿದೆ, ಆದರೆ ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಾತ್ರ ಇದಕ್ಕೆ ಬೆಲೆ ನೀಡುತ್ತಿಲ್ಲ, ಆ ಮೂಲಕ ಒಳಮೀಸಲಾತಿ ಕಲ್ಪಿಸದೇ ಮಾದಿಗ ಸಮುದಾಯಕ್ಕೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದೆ, ಒಳಮೀಸಲಾತಿ ಎನ್ನುವುದು ಸಂವಿಧಾನ ಕರುಣಿಸಿರುವ ಹಕ್ಕು, ಶೋಷಿತ ಸಮುದಾಯಗಳಲ್ಲಿಯೇ ಅತೀ ಹಿಂದುಳಿದಿರುವ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸುಪ್ರೀಂಕೋರ್ಟ್ ಕಳೆದ ವರ್ಷ ಇದೇ ದಿನ ಐತಿಹಾಸಿಕ ತೀರ್ಪು ನೀಡಿದೆ, ಆದರೆ ತೀರ್ಪು ನೀಡಿ ಒಂದು ವರ್ಷ ಕಳೆದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ ಮಾದಿಗ ಸಮಾಜದ ಒಳಮೀಸಲಾತಿ ಜಾರಿಗೊಳಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೊದಲ ಸಚಿವ ಸಂಪುಟದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಮಾತು ನೀಡಿದ್ದರು, ಪ್ರಣಾಳಿಕೆಯಲ್ಲೂ ಘೋಷಿಸಿದ್ದರು, ಆದರೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಮ್ಮ ಮಾತು ತಪ್ಪಿ ಕಾಲಹರಣಕ್ಕಾಗಿ ನ್ಯಾ.ನಾಗಮೋಹನ್‌ದಾಸ್ ಆಯೋಗ ರಚಿಸಿತು, ನಂತರ ೪೦ ದಿನಗಳಲ್ಲಿ ವರದಿ ಪಡೆಯುವುದಾಗಿ ಹೇಳಿತು, ಆದರೆ ಆರು ತಿಂಗಳು ಉರುಳಿವೆ, ಅತ್ತ ಸುಪ್ರೀಂಕೋರ್ಟ್ ಒಳಮೀಸಲಾತಿ ತೀರ್ಪು ಪ್ರಕಟಿಸಿ ವರ್ಷ ಕಳೆದು ಹೋಗಿದೆ, ಆದರೂ ನಮ್ಮ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗಿಲ್ಲ ಎಂದರು.
ಈಗಾಗಲೇ ತೆಲಂಗಾಣ, ಆಂಧ್ರ, ಪಂಜಾಬ್ ಮೊದಲಾದ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿಯಾಗಿದೆ, ಒಂದೆಡೆ ಅಹಿಂದ ನಾಯಕರು ಎಂದು ತಮ್ಮ ಬೆನ್ನು ತಟ್ಟಿಕೊಳ್ಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಳಮೀಸಲಾತಿ ಜಾರಿ ಏಕೆ ಮಾಡುತ್ತಿಲ್ಲ? ಯಾವ ಶಕ್ತಿಗಳ ಒತ್ತಡಕ್ಕೆ ಮಣಿದಿದ್ದಾರೆ ಎಂದು ಕಾರಜೋಳ ಖಾರವಾಗಿ ಪ್ರಶ್ನಿಸಿದರು.
ಈ ಅಧಿವೇಶನದ ಒಳಗಾಗಿ ಒಳಮೀಸಲಾತಿಯಯನ್ನು ಜಾರಿಗೊಳಿಸಿ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು, ಇಲ್ಲವಾದರೆ ಹೋರಾಟದ ಸ್ವರೂಪವನ್ನು ತೀವ್ರಗೊಳಿಸಲಾಗುವುದು ಎಂದು ಗುಡುಗಿದರು.
ಮಾದಿಗ ಸಂಘಟನೆ ಒಕ್ಕೂಟದ ಜಿಲ್ಲಾಧ್ಯಕ್ಷ ಶ್ರೀಶೈಲ ರತ್ನಾಕರ್ ವಿವಿಧ ಸಂಘಟನೆಯ ಪ್ರಮುಖರಾದ ಎಸ್.ಎಸ್ ಲೋಟಗೇರಿ, ಬೀಮು ಮೇಲಿನಮನಿ, ಸದಾನಂದ್ ಗುನ್ನಾಪುರ್. ಪ್ರಶಾಂತ್ ದೊಡ್ಮನಿ ಸಿದ್ದು ಪೂಜಾರಿ, ಯಲ್ಲು ಇಂಗಳಗಿ, ಅಶೋಕ ಕರೆಕಲ್, ಸಂತೋಷ ತಳಕೇರಿ, ಸಾಯಬಣ್ಣ ಪುರದಾಳ, ಶಿವು ಬಗಲಿ, ಆಕಾಶ ಮನಗೂಳಿ, ಸಾಗರ ಪೂಜಾರಿ, ಪರಸರಾಮ ನಾಟೀಕಾರ, ಸಿದಗೊಂಡ ವಾಲಿಕಾರ, ಶ್ರೀನಾಥ ಬೈರವಾಡಗಿ, ಸುರೇಶ ಗಚ್ಚಿನಮನಿ, ಎಮ್ ಆರ್ ದೊಡಮನಿ, ಸುನೀಲ ಸಂದಿಮನಿ, ಪರಸುರಾಮ ರೋಣಿಹಾಳ, ವಿಠ್ಠಲ ಆಸಂಗಿ, ದತ್ತು ಬಂಡೆನ್ನವರ, ವಿಠ್ಠಲ ನಡುವಿನಕೇರಿ ಮೊದಲಾದವರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.