ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಮಕ್ಕಳ ಆರೋಗ್ಯ ಸುಧಾರಣೆಗೆ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಶಿಕ್ಷಣ ಇಲಾಖೆಯಿಂದ ಏರ್ಪಡಿಸುವ ಕ್ರೀಡಾಕೂಟಗಳು ಅನುಕೂಲವಾಗುತ್ತವೆ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ ಬಜಂತ್ರಿ ಹೇಳಿದರು.
ತಾಲ್ಲೂಕಿನ ಘೋಣಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳ ಆರೋಗ್ಯ ಸರಿಯಿದ್ದಾಗ ಮಾತ್ರ ಮಕ್ಕಳ ಬೌದ್ದಿಕ ಮಟ್ಟ ಸುಧಾರಣೆಯಾಗುತ್ತದೆ. ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿಗೆ ಕ್ರೀಡಾಕೂಟ ಅನೂಕೂಲವಾಗತ್ತವೆ. ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಾಮಾನ್ಯ, ಅವುಗಳನ್ನು ಸಮಾನವಾಗಿ ಸ್ವೀಕಾರ ಮಾಡಬೇಕು ಎಂದರು.
ಎಂ.ಬಿ.ಪಾಟೀಲ ಪೌಂಡೇಶನ್ ಕಾರ್ಯದರ್ಶಿ ಯಾಕುಬ ಜತ್ತಿ ಮಾತನಾಡಿ ಕ್ರೀಡಾಕೂಟ ಏರ್ಪಡಿಸುವದರಿಂದ ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಯುತ್ತದೆ. ಪ್ರತಿಭೆ ಇರುವ ಮಕ್ಕಳನ್ನು ಗುರ್ತಿಸಿ ಅರ್ಹ ಮಕ್ಕಳನ್ನು ಆಯ್ಕೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಿಆರ್ಪಿ ಜಿ.ಜಿ.ದೊಡ್ಡಿಹಾಳ, ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಜನಾ ಪವಾರ, ಮುಖ್ಯೋಪಾಧ್ಯಾಯ ಅಂಜನಾ ದೇಶಮುಖ, ಎಸ್ಡಿಎಂಸಿ ಅಧ್ಯಕ್ಷ ಪೈಗಂಬರ ಜತ್ತಿ, ಗ್ರಾಮ ಪಂಚಾಯತಿ, ಉಪಾಧ್ಯಕ್ಷ ಸದಸ್ಯರು, ಎಸ್ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರು ಇದ್ದರು.

