Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಲ್ಪಸಂಖ್ಯಾತ ಮಕ್ಕಳ ಶಾಲಾ ದಾಖಲಾತಿ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಅಲ್ಪಸಂಖ್ಯಾತ ಮಕ್ಕಳ ಶಾಲಾ ದಾಖಲಾತಿ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ವಿವಿಧ ಇಲಾಖೆಯಡಿ ಒದಗಿಸುವ ಯೋಜನೆಗಳ ಲಾಭವನ್ನು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಧಾನಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು. ಅಲ್ಪಸಂಖ್ಯಾತ ಮಕ್ಕಳ ಶೈಕ್ಷಣಿಕ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ, ಮನೆ-ಮನೆಗೆ ಹೋಗಿ ನೊಂದಣಿ ಮಾಡುವ ಮೂಲಕ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಸಮಗ್ರ ಮಕ್ಕಳ ಅಭಿವೃದ್ದಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಕಟ್ಟಡಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಬೇಕು. ಬಾಡಿಗೆ ಕಟ್ಟಡ ಅವಶ್ಯವಿದ್ದಲ್ಲಿ ಮಾಹಿತಿ ಒದಗಿಸಿ ಅಂಗನವಾಡಿ ಕಟ್ಟಡ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಮೂಲಕ ಶಾಲಾ ಶಿಕ್ಷಣದಲ್ಲಿ ಸುಧಾರಣೆ ತರಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉರ್ದು ಶಾಲೆಗಳಲ್ಲಿ ಕೊಠಡಿಗಳು- ಶಿಕ್ಷಕರ ಕೊರತೆ ಸೇರಿದಂತೆ ವಿವಿಧ ಕೊರತೆಗಳನ್ನು ನಿವಾರಿಸಿಕೊಂಡು ಮಕ್ಕಳ ಶಿಕ್ಷಣಕ್ಕೆ ಗಮನ ಹರಿಸಬೇಕು. ಕಲಿಕೆಯಲ್ಲಿ ಹಿಂದುಳಿದ ವರ್ಗಗಳಿಗೆ ಪರಿಹಾರ ಬೋಧನೆ ಮಾಡಬೇಕು. ಫಲಿತಾಂಶದಲ್ಲಿ ಪ್ರತಿಶತ ಹೆಚ್ಚಿಸಲು ಮುಖ್ಯವಾಗಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ, ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಪ್ರಾಥಮಿಕ ಹಂತದಲ್ಲಿಯೇ ೫ನೇ ತರಗತಿಯಿಂದಲೇ ಶಿಕ್ಷಣಕ್ಕೆ ಒತ್ತು ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸರ್ಕಾರ ಹಲವಾರು ಯೋಜನೆಗಳನ್ನು ಶಿಕ್ಷಣಕ್ಕಾಗಿ ಜಾರಿಗೊಳಿಸಿದೆ. ಶಿಕ್ಷಣ ಗುಣಮಟ್ಟಕ್ಕೆ ಒತ್ತು ನೀಡಲಾಗುತ್ತಿದೆ. ಅಗತ್ಯ ಮೂಲಭೂತ ಸೌಲಭ್ಯ, ಶಿಕ್ಷಕರ ನಿಯೋಜನೆ, ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದರೂ ಸಹ ಸಮುದಾಯದ ಮಕ್ಕಳು ಶಿಕ್ಷಣಕ್ಕೆ ಹಿಂದೇಟು ಹಾಕುತ್ತಿರುವುದೇಕೆೆ ಎಂಬುದನ್ನು ಪತ್ತೆ ಹಚ್ಚಬೇಕು. ಇದರಿಂದ ಪರಿಹಾರ ಕಲ್ಪಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಯಾವ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆ ಅಂತಹ ಶಾಲೆಗಳ ದಾಖಲಾತಿ ಕಡಿಮೆಯಾಗಲು ಇರುವ ಮೂಲಕ ಕಾರಣವನ್ನು ಡಿಆರ್‌ಪಿ ಸಿಆರ್‌ಪಿ ಮೂಲಕ ಕಂಡು ಹಿಡಿಯಬೇಕು. ಮಕ್ಕಳ ಶಿಕ್ಷಣ ಹೆಚ್ಚಿಸುವಲ್ಲಿ ಪಾಲಕರು, ಶಿಕ್ಷಕರು, ಸಮುದಾಯ ಸಹಭಾಗಿತ್ವ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸಿ, ಅಲ್ಪಸಂಖ್ಯಾತ ಸಮುದಾಯ ಜನ ಇರುವಲ್ಲಿ ತಿಳುವಳಿಕೆ ನೀಡಿ, ಶಾಲಾ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಬೇಕು. ಕ್ರೀಯಾಯಶೀಲತೆಯಿಂದ ಕಾರ್ಯನಿರ್ವಹಿಸಿ ಶೈಕ್ಷಣಕ ಗುಣಮಟ್ಟ ಹೆಚ್ಚಿಸಲು ಅಗತ್ಯ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ, ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಎಸ್ ಪಾಟೀಲ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಪ್ರಧಾನಮಂತ್ರಿ ೧೫ ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಬಸೀರಅಹ್ಮದ ರಿಸಾಲದಾರ, ಎಸ್.ಎಸ್.ತಾಜೀಮತರಕ್, ನೆಲಸನ್ ನೊರಮನ್ ಐಝಾಕ್ಸ್, ಜ್ಯೋತಿಂದ್ರ ಹಣಮಂತ ಆಯತವಾಡ, ಬಂದೇನವಾಜ ಮುಲ್ಲಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದಶಕರಾದ ಶ್ರೀಮತಿ ಟಿ.ಎಚ್.ಕೊಲ್ಹಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.