ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ೨೦೨೩ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನ ಸೇವಾ ಸಿಂಧು ಪೋರ್ಟ್ಲ್ ನಲ್ಲಿ ಅಕ್ಟೊಬರ್ ೦೧ ರಿಂದ ೧೫ರವರೆಗೆ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.