ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ವಿದ್ಯಾರ್ಥಿಗಳು ದುಶ್ಚಟಗಳ ದುಷ್ಪರಿಣಾಮಗಳನ್ನು ಅರಿತು ಅವುಗಳಿಂದ ದೂರವಿರಬೇಕು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜಿನಲ್ಲಿ ಶುಕ್ರವಾರ ಜರುಗಿದ ವ್ಯಸನ ಮುಕ್ತ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಡಾ.ಮಹಾಂತ ಶಿವಯೋಗಿಗಳ ಜನ್ಮದಿನವನ್ನು ಕರ್ನಾಟಕದಲ್ಲಿ ವ್ಯಸನ ಮುಕ್ತದಿನವನ್ನಾಗಿ ಆಚರಿಸಲಾಗುತ್ತಿದೆ. ಅಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿ ಮಾದಕ ಪದಾರ್ಥ ಹಾಗೂ ಪಾನೀಯಗಳ ಕುರಿತು ಎಚ್ಚರವಹಿಸಿ ಅವುಗಳಿಂದ ದೂರವಿರಬೇಕು. ಮಹಾಂತ ಶಿವಯೋಗಿ ಸ್ವಾಮೀಜಿ ‘ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ೧೯೭೫ ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮದ ಮಹತ್ವ ಅರಿತು ತಾವು ಸಹ ದುಶ್ಚಟಗಳಿಗೆ ಅಂಟಿದವರನ್ನು ಎಚ್ಚರಿಸಲು ಮುಂದಾಗಿ ಎಂದು ಹೇಳುತ್ತಾ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು.
ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕಿ ವಿಜಯಲಕ್ಷ್ಮಿ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಪ್ರಾಚಾರ್ಯ ವ್ಹಿ.ಜಿ.ಹೂನಳ್ಳಿ, ತಹಶೀಲ್ದಾರ ಕಾರ್ಯಾಲಯ ಸಿಬ್ಬಂದಿಗಳಾದ ಚನ್ನಬಸು ಹೊಸಮನಿ, ಸಂತೋಷ ತಳವಾರ, ವಿನೋದಕುಮಾರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಇದ್ದರು.

