Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಹಿರಿದು
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಹಿರಿದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಹಿರಿದಾದದು. ಶಿಕ್ಷಕ, ರೈತ, ಸೈನಿಕ ಈ ದೇಶದ ಬೆನ್ನೆಲುಬಗಳು. ತಂದೆ, ತಾಯಿ ಮಾತುಗಳನ್ನು ಕೇಳದ ಕೆಲವೊಂದಿಷ್ಟು ಮಕ್ಕಳು ಶಿಕ್ಷಕರ ಮಾತುಗಳಿಗೆ ಗೌರವ ಕೊಡುತ್ತಾರೆಂದು ಪ್ರಾಧ್ಯಾಪಕ ಹಾಗೂ ಸಾಹಿತಿ ಡಾ. ಪ್ರಕಾಶ ನರಗುಂದ ಹೇಳಿದರು.
ಬಿದರಕುಂದಿ ಗ್ರಾಮದ ಶಿವಕುಮಾರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಎಡ್ ಪ್ರಶಿಕ್ಷಣಾರ್ಥಿಗಳ ನಿಕಟ ಸೇವಾ ಪೂರ್ವ ತರಬೇತಿ ಮುಕ್ತಾಯ ಹಾಗೂ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಯುವಕರು ಮುಂದಾಗಬೇಕು. ಕುತೂಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯ ಬಳಸಬಾರದು. ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಚಿಕಿತ್ಸೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡುವುದು ಗುರುತರ ನಾಗರಿಕ ಸಮಾಜದ ಕರ್ತವ್ಯ. ಖಿನ್ನತೆಯಿಂದ ಮಾನಸಿಕ ದುಃಖ ಉಂಟಾಗಿ ವ್ಯಕ್ತಿಯ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಲಿಂಗೈಕ್ಯ ಮಹಾಂತ ಶಿವಯೋಗಿಗಳು ಬಸವ ತತ್ವದ ಪರಿಪಾಲಕರಾಗಿ ಸಮಾಜದಲ್ಲಿ ಅಡಗಿರುವ ವಿವಿಧ ಮೌಡ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬರ ಮನೆ ಮನಗಳಲ್ಲಿ ನೆಲೆಯೂರಿದವರು. ಪೂಜ್ಯರು ಉತ್ತಮ ಪ್ರವಚನಕಾರರಾಗಿ, ಸಂಗೀತಗಾರರಾಗಿ, ಕಲಾವಿದರ ಆಶ್ರಯದಾತರಾಗಿ, ಬಸವ ಜಂಗಮ ಜ್ಯೋತಿಯಾಗಿ ನುಡಿದಂತೆ ನಡೆದ ನಿಜ ಶರಣರು. ತಂದೆ ನೀನು ತಾಯಿ ನೀನು ಎಂದು ಬಸವೇಶ್ವರನನ್ನು ತಮ್ಮೊಳಗೆ ತುಂಬಿಕೊಂಡು, ದೀನ ದಲಿತರ ಜನಾಂಗಗಳ ಮನೆಗೆ ಹೋಗಿ ಅಪ್ಪ ಬೊಪ್ಪ ಎಂದು ಎಲ್ಲರನ್ನು ಅಪ್ಪಿಕೊಂಡವರು. ವಿದ್ಯಾರ್ಥಿಗಳು ಗುರು, ಲಿಂಗ, ಜಂಗಮ ಇವುಗಳ ಬಗ್ಗೆ ಅರಿತುಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳು ಶರಣರು ಬರೆದ ವಚನಗಳನ್ನು ಅಧ್ಯಯನ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಯ ಆರ್.ಬಿ.ಗುಗ್ಗುರಿ ಮಾತನಾಡಿ, ಈ ನಾಡಿಗೆ ಶಿಕ್ಷಕರ ಕೊಡುಗೆ ಅಪಾರವಾದದ್ದು. ವಿನಯ, ಪ್ರೀತಿ, ಮಮತೆ, ತ್ಯಾಗ ಮುಂತಾದ ಮಾನವೀಯ ಗುಣಗಳನ್ನು ಶಿಕ್ಷಕರು ಹೊಂದಿರುತ್ತಾರೆ. ಎರಡು ತಿಂಗಳವರೆಗೆ ಎಂ.ಜಿ.ವ್ಹಿ.ಸಿ ಬಿಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಬಂದು ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಪ್ರಿಯರಾದವರು. ಇವರ ಬದುಕು ಬಂಗಾರವಾಗಲಿ ಎಂದು ಹಾರೈಸಿದರು.
ಈ ವೇಳೆ ಎಚ್.ಡಿ.ನದಾಫ್, ಬಿ.ಎಸ್.ಓದಿಸೋಮಠ, ಎಂ.ಎಸ್.ಮೇಟಿ, ಕೆ.ಪಿ.ಬಿರಾದಾರ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿರಿದ್ದರು. ಪ್ರಶಿಕ್ಷಣಾರ್ಥಿಗಳ ಪಾಠ ಬೋಧನೆಗಳ ಬಗ್ಗೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಆರ್. ಡಿ. ಗುಡಿಮನಿ ಸ್ವಾಗತಿಸಿದರು, ಎಂ.ಪಿ ದೇಶಪಾಂಡೆ ನಿರೂಪಿಸಿದರು, ಎಂ.ಎಚ್.ಹಂಡಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.