Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂಜಾರಾ ಸಮಾಜ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಲಿ :ಸಚಿವ ಪಾಟೀಲ
(ರಾಜ್ಯ ) ಜಿಲ್ಲೆ

ಬಂಜಾರಾ ಸಮಾಜ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಲಿ :ಸಚಿವ ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪರಿಶ್ರಮ ಜೀವಿಗಳಾದ ಬಂಜಾರಾ ಸಮಾಜ ಬಾಂಧವರದಲ್ಲಿ ದೈವ ಭಕ್ತಿಗೆ ಕೊರತೆ ಇಲ್ಲ. ಆದರೆ ಉಕ್ಕಲಿ ತಾಂಡಾದ ಬಂಜಾರಾ ಜನರು ದೇವರ ಮೇಲಿನ ಭಕ್ತಿಯ ಜೊತೆಗೆ ಯುಕ್ತಿಗೂ ಆದ್ಯತೆ ನೀಡಬೇಕಿದೆ. ದೇವಸ್ಥಾನ ಕಟ್ಟಲು ತೋರುವ ಆಸಕ್ತಿ ಜೊತೆಗೆ ನಿಮ್ಮ ಮಕ್ಕಳ ಉನ್ನತ ಭವಿಷ್ಯಕ್ಕಾಗಿ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಬೇಕೆಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ಕಿವಿಮಾತು ಹೇಳಿದರು.
ತಾಲೂಕಿನ ಉಕ್ಕಲಿ ತಾಂಡಾದಲ್ಲಿ ಸೋಮವಾರ ಸಂತ ಸೇವಾಲಾಲ ಮೂರ್ತಿ ಅನಾವರಣ ಹಾಗೂ ಅಂಗನವಾಡಿ ನೂತನ ಕಟ್ಟಡ ಲೋಕಾರ್ಪಣೆ ಮಾಡಿ ನಂತರ ಜರುಗಿದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣಕ್ಕೆ ಆದ್ಯತೆ ನೀಡಿದರೆ ನಿಮ್ಮ ಮಕ್ಕಳು ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿ, ಸಮಾಜದಲ್ಲಿ ವಿವಿಧ ಸೇವೆ ಮಾಡಲು ಸಾಧ್ಯವಾಗಲಿದೆ ಎಂದರು.
ಬಂಜಾರಾ ಸಮಾಜದವರು ದುರ್ಗಾದೇವಿ ಹಾಗೂ ಸಂತ ಸೇವಾಲಾಲ ಅವರ ದೇವಸ್ಥಾನ ಕಟ್ಟುವಲ್ಲಿ ವಿಶೇಷ ಆದ್ಯತೆ ನೀಡುತ್ತೀರಿ. ಈ ಎರಡು ದೇವಸ್ಥಾನಗಳ ಹೊರತಾಗಿ ಅನ್ಯ ದೇವಸ್ಥಾನಗಳನ್ನು ಕಟ್ಟಲು ಮುಂದಾಗಬೇಡಿ. ಬದಲಾಗಿ ಮಕ್ಕಳ ಉನ್ನತ ಶಿಕ್ಷಣ ಕೊಡಿಸಿ, ಶೈಕ್ಷಣಿಕ ಪ್ರಗತಿಗೆ ಆಸಕ್ತಿ ತೋರಬೇಕಿದೆ. ಇದರಿಂದ ನಿಮ್ಮ ಮಕ್ಕಳು ವಿವಿಧ ಹುದ್ದೆಗಳನ್ನು ಪಡೆಯುವ ಮೂಲಕ ನಿಮ್ಮ ಕುಟುಂಬಕ್ಕೆ ಅರ್ಥಿಕ ಪ್ರಗತಿಗೆ ಹಾಗೂ ಸಾಮಾಜಿಕವಾಗಿ ಉನ್ನತ ಸ್ಥಾನ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಬಂಜಾರಾ ಸಮಾಜ ಬಾಂಧವರು ಶೈಕ್ಷಣಿಕವಾಗಿ ಹಿಂದೆ ಇದ್ದೀರಿ ಎಂದಲ್ಲ. ಈಗಾಗಲೇ ನಿಮ್ಮ ಸಮುದಾಯದ ಜನರು ಉನ್ನತ ಶಿಕ್ಷಣ ಪಡೆದು ಐಎಎಸ್, ಐಪಿಎಸ್, ಕೆಎಎಸ್, ಎಂಜಿನಿಯರ್ ಸೇರಿದಂತೆ ವಿವಿಧ ಉನ್ನತ ಹುದ್ದೆಯಲ್ಲಿದ್ದಾರೆ. ಹೀಗಾಗಿ ನಿಮ್ಮ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸಲು ಹಾಗೂ ನಿಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದಕ್ಕೂ ಆದ್ಯತೆ ನೀಡಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ಉಕ್ಕಲಿ ಗ್ರಾ.ಪಂ. ಅಧ್ಯಕ್ಷ ನಿಂಗೊಂಡ ಸಿಂದಗಿ, ಉಪಾಧ್ಯಕ್ಷ ಅಪ್ಪಣ್ಣ ಬ್ಯಾಕೋಡ, ಮಾಜಿ ಉಪಾಧ್ಯಕ್ಷ ಅಶೋಕ ಇಂಡಿ, ಗ್ರಾಮದ ಹಿರಿಯ ಮುಖಂಡ ಎ.ಎಂ.ಪಾಟೀಲ, ಬಸಪ್ಪ ಹನುಮಶೆಟ್ಟಿ, ಬಾಳಾಸಾಹೇಬ ಮಸಳಿ, ಬಸವರಾಜ ದೊಡಮನಿ, ರೇವು ರಾಠೋಡ, ಸಂತೋಷ ರಾಠೋಡ, ದಾಮು ನಾಯಕ, ಗಣಪತಿ ನಾಯಕ, ವಿಲಾಸ ರಾಠೋಡ, ಪಾಂಡು ನಾಯಕ, ತಹಸೀಲ್ದಾರ ವೈ.ಎಸ್. ಸೋಮನಕಟ್ಟಿ, ತಾ.ಪಂ. ಇಒ ಪ್ರಕಾಶ ದೇಸಾಯಿ, ಬಿಇಒ ವಸಂತ ರಾಠೋಡ, ಸಿಡಿಪಿಓ ಶಿಲ್ಪಾ ಹಿರೇಮಠ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.