ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣದ ನೂತನ ಸುಶೀಲವರ್ದಿನಿ ಮಹಿಳಾ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನಾ ಕಾರ್ಯಕ್ರಮಕ್ಕೆ ಖ್ಯಾತ ಚಿತ್ರನಟಿ ಶೃತಿ ಆಗಮಿಸಲಿದ್ದಾರೆ ಎಂದು ಸೊಸೈಟಿಯ ಅಧ್ಯಕ್ಷ ಲಕ್ಷ್ಮೀಬಾಯಿ(ಸವಿತಾ) ಚಂದ್ರಶೇಖರ್ ಬೆಳ್ಳುಬ್ಬಿ ಹೇಳಿದರು.
ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 6 ರಂದು ಬೆಳಗ್ಗೆ 11.00 ಗಂಟೆಗೆ ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದ ಸಂಕೀರ್ಣದಲ್ಲಿ ಸುಶೀಲವರ್ದಿನಿ ಮಹಿಳಾ ಕೋ ಆಪರೇಟಿವ್ ಸೊಸೈಟಿ ಉದ್ಘಾಟನೆಯನ್ನು ಚಿತ್ರನಟಿ ಶೃತಿಯವರು ನೆರವೇರಿಸಲಿದ್ದಾರೆ. ಸಾನಿಧ್ಯವನ್ನು ದಿಗಂಬರೇಶ್ವರ ಮಠದ ಯೋಗಿ ಕಲ್ಲಿನಾಥ ದೇವರು ಹಾಗೂ ಶೀಲವಂತ ಮಠದ ಕೈಲಾಸನಾಥ ಮಹಾಸ್ವಾಮಿಗಳು ವಹಿಸುವರು, ಅಧ್ಯಕ್ಷತೆಯನ್ನು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ವಿಧಾನಪರಿಷತ್ ಸದಸ್ಯ ಎಚ್.ಆರ್. ನಿರಾಣಿ ಜ್ಯೋತಿ ಬೆಳಗಿಸುವವರು, ಮಾಜಿ ಸಚಿವ ಎಸ್.ಆರ್. ಪಾಟೀಲ್ ಶೇಅರ್ ಪತ್ರಗಳನ್ನು ವಿತರಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ರಾಜಶೇಖರ್ ಶೀಲವಂತ, ವಿಜಯಪುರ ಬಿಜೆಪಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಬಾಗಲಕೋಟ ಬಿಜೆಪಿ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ್, ವಯನಾಡು ಓವರಸಿಸ್ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ವಿಜಯಲಕ್ಷ್ಮಿ ವಿಜಯ್ ರೆಡ್ಡಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಭಾಗ್ಯಶ್ರೀ ಎಸ್.ಕೆ, ಶ್ರೀಶೈಲ ಹಂಗರಗಿ, ಡಾ. ಲಕ್ಷ್ಮಿ ತೆಲ್ಲೂರ, ಸಿ.ಎಂ. ಗಣಕುಮಾರ, ಬಿ.ಎಸ್ ಹಂಗರಗಿ, ವಿನೀತಕುಮಾರ್ ದೇಸಾಯಿ, ರಾಜಶೇಖರ್ ಶೀಲವಂತ, ಕಲ್ಲಪ್ಪ ಸೋನ್ನದ ಸೇರಿದಂತೆ ಇನ್ನಿತರರು ಉಪಸ್ಥಿತರಿವರು ಎಂದು ಅವರು ತಿಳಿಸಿದರು.

