ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೦೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣಗೊಂಡ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಡೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಡೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ, ವಿದ್ಯಾರ್ಥಿಯ ಬ್ಯಾಂಕ್ ವಿವರ, ಇತ್ತಿಚ್ಚಿನ ಎರಡು ಪಾಸಪೋರ್ಟ ಅಳತೆಯ ಭಾವಚಿತ್ರ ಗಳೊಂದಿಗೆ ದಿನಾಂಕ ೧೫-೦೮-೨೦೨೫ರ ಒಳಗಡೆ ಸಂಘದ ಕಛೇರಿ, ಅಧ್ಯಕ್ಷರು, ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಅಂಗಡಿ ನಂ. ೨೦೧, ಮೊದಲನೆ ಮಹಡಿ, ಎಸ್.ಎಸ್. ಕಾಂಪ್ಲೇಕ್ಸ, ಸಿದ್ದೇಶ್ವರ ದೇವಸ್ಥಾನದ ಹತ್ತಿರ, ಬಿ.ಎಲ್.ಡಿ.ಇ. ರಸ್ತೆ, ವಿಜಯಪುರ-೫೮೬೧೦೧ ಇಲ್ಲಿಗೆ ತಲುಪಿಸಲು ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ದ ಅಧ್ಯಕ್ಷ ರಮೇಶ ಚವ್ಹಾಣ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಅಧ್ಯಕ್ಷರು, ರಮೇಶ ಚವ್ಹಾಣ ಮೊ : ೯೬೧೧೫೬೩೫೦೮, ಕಾರ್ಯದರ್ಶಿ, ಸತೀಶ ಕಲಾಲ ಮೋ : ೯೯೦೦೯೦೫೨೯೧, ನಿರ್ದೇಶಕರಾದ, ಸುನೀಲ ಗಲಗಲಿ ೯೪೪೮೮೯೭೦೭೩ ಅವರನ್ನು ಸಂಪರ್ಕಿಸಬಹುದು.

