Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 3 ಅಸ್ಥಿಪಂಜರ ಪತ್ತೆ?
(ರಾಜ್ಯ ) ಜಿಲ್ಲೆ

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 3 ಅಸ್ಥಿಪಂಜರ ಪತ್ತೆ?

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೂರುದಾರರು ತೋರಿಸಿದ ಸ್ಥಳಗಳಲ್ಲಿ ಮಹಿಳೆ ಸೇರಿ ಮೂವರ ಅಸ್ಥಿಪಂಜರ ಪತ್ತೆ ಎಂದು ಹೇಳಿದ ವಕೀಲ ಮಂಜುನಾಥ್​

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ಅನಾಮಿಕ ತೋರಿಸಿದ ಜಾಗದಲ್ಲಿ ಎಸ್​ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
7ನೇ ದಿನವಾದ ಮಂಗಳವಾರವೂ ಉತ್ಕನನ ಕಾರ್ಯ ಪುನರಾರಂಭಿಸಿದ ವಿಶೇಷ ತನಿಖಾ ತಂಡ(SIT)ಕ್ಕೆ ಯಾವುದೇ ಮಾನವ ಅಸ್ಥಿಪಂಜರದ ಅವಶೇಷಗಳು ಕಂಡುಬಂದಿಲ್ಲ ಎನ್ನಲಾಗಿದೆ.
ಭಾರೀ ಮಳೆಯ ನಡುವೆ ಸಾಕ್ಷಿ-ದೂರುದಾರ ತೋರಿಸಿರುವ 11 ಮತ್ತು 12ನೇ ಸ್ಥಳಗಳಲ್ಲಿ SITಯ ತನಿಖಾಧಿಕಾರಿ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ(AC) ಸ್ಟೆಲ್ಲಾ ವರ್ಗೀಸ್ ಅವರ ಮೇಲ್ವಿಚಾರಣೆಯಲ್ಲಿ ಮಂಗಳವಾರ ಸಹ ಸಮಾಧಿ ಅಗೆಯುವ ಕಾರ್ಯ ನಡೆಸಲಾಯಿತು. ಆದರೆ ಯಾವುದೇ ಅವಶೇಷಗಳ ಕುರುಹು ಇಲ್ಲದ ಕಾರಣ SIT ಯ ಪ್ರಯತ್ನಗಳು ಯಾವುದೇ ಫಲಿತಾಂಶ ನೀಡಿಲ್ಲ. ಇಲ್ಲಿಯವರೆಗೆ SIT ಅಗೆದ 12 ಸ್ಥಳಗಳಲ್ಲಿ, ಕೇವಲ ಒಂದು ಸ್ಥಳದಲ್ಲಿ ಮಾತ್ರ ಮಾನವ ಅಸ್ಥಿಪಂಜರ ಪತ್ತೆಯಾಗಿದೆ ಎನ್ನಲಾಗಿದೆ.
ಏತನ್ಮಧ್ಯೆ, ಧರ್ಮಸ್ಥಳದಲ್ಲಿ ದಶಕದ ಹಿಂದೆ ನಾಪತ್ತೆಯಾಗಿದ್ದರು ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರ ತಾಯಿ ಸುಜಾತಾ ಭಟ್ ಅವರ ವಕೀಲರು, ‘ಸೋಮವಾರ ದೂರುದಾರರು ತೋರಿಸಿದ ಸ್ಥಳಗಳನ್ನು ಅಗೆದ ನಂತರ ಮೂರು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ’ ಎಂದು ಹೇಳಿಕೊಂಡಿದ್ದಾರೆ.
ಸೋಮವಾರ ಪಾಯಿಂಟ್ 11ರಿಂದ 100 ಮೀಟರ್ ದೂರದಲ್ಲಿ ಮೂರು ಮಾನವ ಅಸ್ಥಿಪಂಜರ ಅವಶೇಷಗಳು ಪತ್ತೆಯಾಗಿವೆ. ಅವುಗಳಲ್ಲಿ ಒಂದು ಮಹಿಳೆಯದ್ದಾಗಿತ್ತು. ಅದೇ ಸ್ಥಳದಲ್ಲಿ ಮಹಿಳೆಯ ಸೀರೆ ಕೂಡ ಪತ್ತೆಯಾಗಿದೆ ಸುಜಾತ ಭಟ್ ಪರ ವಕೀಲ ಮಂಜುನಾಥ್​ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರದ ಕಾರ್ಯಾಚರಣೆ ಯಶಸ್ವಿಯಾಗಿದೆ. ಏಕೆಂದರೆ ಎಸ್​ಐಟಿ ಅನಾಮಿಕ ದೂರುದಾರನಿಗೆ ಹೊಸ ಜಾಗ ತೋರಿಸಲು ಅವಕಾಶ ನೀಡಿದೆ. ಇದರಿಂದ ನಿನ್ನೆಯ ಅಸ್ಥಿಪಂಜರ ಅಗೆಯುವ ಕಾರ್ಯ ಯಶಸ್ವಿಯಾಗಿತ್ತು. ಎಸ್​ಐಟಿ ಸಹಿತ ಶೋಧ ನಡೆಸುತ್ತಿರುವ ತಂಡದ ಕಾರ್ಯಾಚರಣೆ ಶ್ಲಾಘನೀಯ ಅಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ದೂರುದಾರರು ಮೊದಲ ದಿನ ಮಾಡಿದ ಆರಂಭಿಕ ಅಳತೆಗೆ ಬದ್ಧರಾಗಿ, ಆ ಸ್ಥಳದಿಂದ ಮಾತ್ರ ಅವಶೇಷಗಳನ್ನು ಹೊರತೆಗೆಯಬೇಕೆಂದು ಒತ್ತಾಯಿಸುವುದು ಅವೈಜ್ಞಾನಿಕ ಮಾತ್ರವಲ್ಲ, ಅರ್ಥಹೀನವೂ ಆಗಿರುತ್ತದೆ. ಮೊದಲ ದಿನ ತೋರಿಸಿದ ಸ್ಥಳಗಳನ್ನು ಗುರುತಿಸುವ ಸ್ವಾತಂತ್ರ್ಯವಿರುವ ವ್ಯಕ್ತಿಗೆ, ಆರಂಭದಲ್ಲಿ ಗುರುತಿಸಿದ್ದು ನಂತರ ತಪ್ಪಾಗಿದೆ ಎಂದು ಕಂಡುಬಂದರೆ ತನ್ನನ್ನು ತಾನು ಸರಿಪಡಿಸಿಕೊಳ್ಳುವ ಸ್ವಾಭಾವಿಕ ಸ್ವಾತಂತ್ರ್ಯವೂ ಇರುತ್ತದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಎರಡನೇ ದೂರು ಎಸ್‌ಐಟಿಗೆ ಹಸ್ತಾಂತರ

ಆಗಸ್ಟ್ 1 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾನವ ಅವಶೇಷಗಳ ಪತ್ತೆ ಪ್ರಕರಣ ಮತ್ತು ಆಗಸ್ಟ್ 4 ರಂದು ಜಯಂತ್ ಎಂಬ ವ್ಯಕ್ತಿ ದಾಖಲಿಸಿದ್ದ ದೂರನ್ನು ಎಸ್‌ಐಟಿಗೆ ಹಸ್ತಾಂತರಿಸಲಾಗಿದೆ.
ಪೊಲೀಸ್ ಮಹಾ ನಿರ್ದೇಶಕ ಎಂಎ ಸಲೀಂ ಅವರು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್ ಪ್ರಕರಣವನ್ನು ಹಸ್ತಾಂತರಿಸಲು ಆದೇಶಿಸಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅರುಣ್ ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.