ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಅಕ್ಟೋಬರ್ ೫ ಹಾಗೂ ೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ ೫ ರಂದು ಜಿಲ್ಲೆಯಲ್ಲಿರುವ ಅಂಗನವಾಗಿ ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆ, ದತ್ತು ಕೇಂದ್ರ, ವಸತಿ ನಿಲಯ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಅಕ್ಟೊಬರ್ ೬ ರಂದು ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment