ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಸಾರ್ವಜನಿಕರ ತೆರಿಗೆ ಹಣದಲ್ಲಿಯೇ ನಿರ್ಮಾಣಗೊಂಡಿರುವ ಸಾರ್ವಜನಿಕ ಸ್ವತ್ತುಗಳನ್ನು ಹಾಳಾಗದಂತೆ ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಉಮಾಶ್ರೀ ಹೇಳಿದರು.
ಗ್ರಾಮದ ಯಮನೂರಪ್ಪನ ದೇವಸ್ಥಾನದ ಹತ್ತಿರ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಾಣವಾಗಲಿರುವ ಸಮುದಾಯ ನೈರ್ಮಲ್ಯ ಸಂಕೀರ್ಣ ಘಟಕ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಶೋಷಿತ ಸಮುದಾಯ ಬಯಲು ಬಹಿರ್ದೆಸೆಗೆ ಹೋಗಬಾರದೆಂಬ ಕಾಳಜಿಯಿಂದ ನಿರ್ಮಿಸಲಾಗುತ್ತಿರುವ ಈ ನೈರ್ಮಲ್ಯ ಘಟಕವನ್ನು ಗುತ್ತಿಗೆದಾರರು ವ್ಯವಸ್ಥಿತವಾಗಿ ನಿರ್ಮಿಸಬೇಕು, ಗ್ರಾಮಸ್ಥರು ಸ್ವಚ್ಚತೆಯೊಂದಿಗೆ ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಗ್ರಾ.ಪಂ. ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿ, ತಾ.ಪಂ. ಕಾರ್ಯನಿರ್ವಾಹಕ ಅಭಿಯಂತರ ಸಿದ್ದಪ್ಪ ಪಟ್ಟಿಹಾಳ, ಕಾಂಗ್ರೆಸ್ ತೇರದಾಳ ಮತಕ್ಷೇತ್ರದ ಅಧ್ಯಕ್ಷ ಲಕ್ಮಣ ದೇಸಾರಟ್ಟಿ, ರಾಜಶೇಖರ ಭದ್ರಣ್ಣವರ, ಪ್ರವೀಣ ಪೂಜೇರಿ, ಗ್ರಾ.ಪಂ. ಸದಸ್ಯ ಬಾಳಪ್ಪ ಗಡೆಪ್ಪನವರ, ನಾಗಪ್ಪ ಆಲಕನೂರ, ತುಕಾರಾಮ ದೊಡಮನಿ, ಸದಸ್ಯೆ ಮಂಜುಳಾ ರವಿಂದ್ರ ದೊಡವಾಡ, ಶಿವಪ್ಪ ನಾಗನೂರ, ಅರುಣ ಗಾಣಿಗೇರ, ಮಹಾಲಿಂಗ ಬಳಗಾರ, ಅಶೋಕ ಧಡೂತಿ, ರವಿ ದೊಡವಾಡ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಿರಸಾಬ ನದಾಫ, ಅಶೋಕ ಚಿಮ್ಮಡ, ಮಹಾಂತೇಶ ಜಾಲಿಕಟ್ಟಿ, ಸಲೀಮ ಸರಕಾವಸ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಉಮಾಶ್ರೀಯವರನ್ನು ಸತ್ಕರಿಸಿ ಗೌರವಿಸಲಾಯಿತು.

