ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಾಲೂಕಿನ ಬಾಬಾನಗರ ಗ್ರಾಮದ ಬಸವರಾಜ ಮಸಳಿ ಹಾಗೂ ಕಳ್ಳಕವಟಗಿ ಗ್ರಾಮದ ಸಚಿನ ಗದ್ಯಾಳ ಯುವಕರಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದಲ್ಲಿ ಬ್ರೋಡಾಕಾಸ್ಟ ಪ್ರೈವೇಟ್ ಲಿಮಿಟೆಡ್ ಅವರ ಸಹಯೋಗದಲ್ಲಿ ಪುನೀತ್ ರಾಜಕುಮಾರ್ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಳೆದ ಹಲವಾರು ವರ್ಷಗಳಿಂದ ಸಮಾಜ ಸೇವೆ, ಶಿಕ್ಷಣ ಪ್ರೇಮಿಗಳಾಗಿದ್ದು ಕನ್ನಡ ನಾಡಿನ ನೆಲ, ಜಲ, ಭಾಷೆಯ ಹಿತಕ್ಕಾಹಿ ಮತ್ತು ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಇವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಇವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

