ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎಂ.ಎ., ಬಿ.ಲಿಬ್‌ಎಸ್.ಸಿ, ಎಂ.ಲಿಬ್‌ಎಸ್.ಸಿ, ಎಂಎಸ್‌ಡಬ್ಲುö್ಯ, ಎಂ.ಕಾಂ, ಎಂ.ಎಸ್.ಸಿ, ಎಂಸಿಎ, ಎಂಬಿಎ ಸೇರಿದಂತೆ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಆಸಕ್ತ ವಿದ್ಯಾರ್ಥಿನಿಯರು ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೨೫ ಕೊನೆಯ ದಿನವಾಗಿದೆ.
ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್www.kswu.ac.in ಅಥವಾ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಮುದ್ರಿತ ಪ್ರತಿಯನ್ನು ವಿಶ್ವವಿದ್ಯಾನಿಲಯದ ಆಯಾ ವಿಭಾಗಗಳ ಮುಖ್ಯಸ್ಥರ ಕಚೇರಿಗೆ ತಲುಪಿಸಬೇಕು ಎಂದು ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ವಿಶ್ವವಿದ್ಯಾಲಯದಲ್ಲಿ ಸದ್ಯ ಈ ಕೆಳಗಿನ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬಹುದು:
ಲಭ್ಯವಿರುವ ಕೋರ್ಸ್ಗಳು: ಕಲಾ ನಿಕಾಯ: ಎಂ.ಎ- ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಪ್ರದರ್ಶಕ ಕಲೆಗಳ ವಿಭಾಗ (ಎಂ.ಮ್ಯೂಜಿಕ್-ಹಿಂದೂಸ್ತಾನಿ ಮ್ಯೂಜಿಕ್), ಸಮಾಜ ವಿಜ್ಞಾನ ನಿಕಾಯ: ಎಂ.ಎ.: ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಅರ್ಥಶಾಸ್ತç, ಇತಿಹಾಸ, ಮಹಿಳಾ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ. ಗ್ರ‍್ರಂಥಾಲಯ ಮತ್ತು ಮಾಹಿತಿ ವಿಜ್ಞಾನ (ಒಂದು ವರ್ಷದ ಬಿ.ಲಿಬ್‌ಎಸ್.ಸಿ ಹಾಗೂ ಒಂದು ವರ್ಷದ ಎಂ.ಲಿಬ್‌ಎಸ್.ಸಿ) ಮತ್ತು ಮಾಸ್ಟರ್ ಆಫ್ ಸೋಶಿಯಲ್ ವರ್ಕ್ (ಎಂಎಸ್‌ಡಬ್ಲುö್ಯ), ವಿಜ್ಞಾನ ನಿಕಾಯ: ಎಂ.ಎಸ್.ಸಿ.- ಭೌತಶಾsಸ್ತç, ರಸಾಯನಶಾಸ್ತç, ಗಣಿತ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ sಸಂಖ್ಯಾಶಾಸ್ತç, ಜೈವಿಕ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಆಹಾರ ಸಂಸ್ಕರಣೆ ಮತ್ತು ಪೌಷ್ಟಿಕ, ಕಂಪ್ಯೂಟರ್ ಸೈನ್ಸ್ ಮತ್ತು ಎಂಸಿಎ. ಶಿಕ್ಷಣ ನಿಕಾಯ: ಎಂ.ಈಡಿ, ಬಿಪಿಈಡಿ, ಎಂ.ಪಿ.ಈಡಿ, ವಾಣಿಜ್ಯ ನಿಕಾಯ: ಎಂ.ಕಾಂ. ಮತ್ತು ಎಂಬಿಎ,. ಮತ್ತು ವಿವಿಧ ವಿಷಯಗಳಲ್ಲಿ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳು.
ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅತ್ಯಾಧುನಿಕ ಬೋಧನಾ ತಂತ್ರಗಳು- ಸ್ಮಾರ್ಟಬೋರ್ಡ್ ಮತ್ತು ಡಿಜಿಟಲ್ ಕ್ಲಾಸ್‌ರೂಂ, ಮಲ್ಟಿಮೀಡಿಯಾ ಲ್ಯಾಬ್ ಮತ್ತು ಲಾಂಗ್ವೇಜ್ ಲ್ಯಾಬ್, ಸುಸಜ್ಜಿತ ಪ್ರಯೋಗಾಲಯಗಳು, ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ, ಸಾಪ್ಟವೇರ್ ಟೆಕ್ನಾಲಜಿ ಪಾರ್ಕ್ , ೨೪x೭ ಇಂಟರ್‌ನೆಟ್ ಸೌಲಭ್ಯ, ಮಕ್ಕಳ ಲಾಲನೆ-ಪಾಲನೆಗೆ ಡೇಕೇರ್ ಸೆಂಟರ್, ನಗರದ ವಿವಿಧ ಭಾಗಗಳಿಂದ ವಿಶ್ವವಿದ್ಯಾಲಯಕ್ಕೆ ವಾಹನ ವ್ಯವಸ್ಥೆ ಮುಂತಾದ ಸೌಲಭ್ಯಗಳಲ್ಲಿ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಒದಗಿಸಲಾಗಿದೆ.
ಮಹಿಳೆಯರು ಸುಲಭವಾಗಿ, ಆಕರ್ಷಕವಾಗಿ ಮತ್ತು ಕೈಗೆಟುಕುವ ದರದಲ್ಲಿ ಉನ್ನತ ಶಿಕ್ಷಣ ಪಡೆಯಲು ಸೂಕ್ತ ವಾತಾವರಣ ನಿರ್ಮಾಣ ಮಾಡುವಲ್ಲಿ ಮಹಿಳಾ ವಿಶ್ವವಿದ್ಯಾಲಯ ಹಲವಾರು ಕ್ರಮಗಳನ್ನು ಕೈಕೊಂಡಿದೆ. ಪ್ರವೇಶ ಮತ್ತು ಪರೀಕ್ಷಾ ಶುಲ್ಕ ಹಾಗೂ ಕಾಲೇಜುಗಳಿಗೆ ವಿಧಿಸುವ ಸಂಲಗ್ನ ಶುಲ್ಕಗಳು ಕಡಿಮೆಯಿವೆ. ಜ್ಞಾನ ಸಂಪಾದಿಸುವ ಆಸಕ್ತಿಯುಳ್ಳ ಮಹಿಳೆಯರು, ಉನ್ನತ ಶಿಕ್ಷಣವನ್ನು ಪಡೆಯುವ ಹಂಬಲ ಮತ್ತು ಬಲವನ್ನು ಹೊಂದಿದವರಿಗೆ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶಿಷ್ಟ ರೀತಿಯ ಪಠ್ಯಕ್ರಮವನ್ನು ರೂಪಿಸಲಾಗಿದೆ. ಇಲ್ಲಿನ ವಿದ್ಯಾರ್ಥಿನಿಯರು ತಾವು ಓದುತ್ತಿರುವ ಕೋರ್ಸ್ನ ವಿಷಯಗಳಲ್ಲದೇ ಇತರ ವಿಷಯಗಳಲ್ಲಿ ಒಂದೊಂದು ವಿಷಯವನ್ನು ಪ್ರತಿ ಸೆಮಿಸ್ಟರ್‌ನಲ್ಲಿ ಓದುವ ಅವಕಾಶ ಕಲ್ಪಿಸಲಾಗಿದೆ ಎಂದೂ ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಂಕರಗೌಡ ಸೋಮನಾಳ, ಕುಲಸಚಿವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರÀ- ೫೮೬೧೦೮. ತಿebsiಣe: ತಿತಿತಿ.ಞsತಿu.ಚಿಛಿ.iಟಿ ಸಂಪರ್ಕಿಸಬಹುದಾಗಿದೆ.

