ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಮಳೆ ನಿಮಿತ್ತ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಮತ್ತು ವಿವಿಧ ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡು ಆಗಿರುವ ತೊಂದರೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದಿರುವ ಸಚಿವರು ದಿ.9 ಶನಿವಾರ ರಂದು ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಈ ಕುರಿತು ವಿಸ್ತೃತವಾಗಿ ಚರ್ಚಿಸಲಿದ್ದಾರೆ.
ಮಳೆಯಿಂದ ಸೋರಿಕೆಯಾಗಿರುವ ಅಂಗವಾಡಿ ಮತ್ತು ಶಾಲಾ ಕಟ್ಟಡಗಳ ಕುರಿತು ಮಾಹಿತಿ ಪಡೆದು ಕೂಡಲೇ ಆ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

