ಉದಯರಶ್ಮಿ ದಿನಪತ್ರಿಕೆ
ಇಂಡಿ: ಆಗಸ್ಟ್ 15 ರಂದು ನಡೆಯಲಿರುವ 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆಗಳ ಕುರಿತು ಚರ್ಚಿಸಲು ಮಂಗಳವಾರ ಕಂದಾಯ ಉಪವಿಭಾಗ ಅಧಿಕಾರಿ ಅನುರಾಧ ವಸ್ತ್ರದ ಅಧ್ಯಕ್ಷತೆ ಸಭೆ ಜರುಗಿದ್ದು, ಅರ್ಥಪೂರ್ಣವಾಗಿ ಆಚರಣೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ತಿಳಿಸಿದರು.
ತಾಲ್ಲೂಕು ಆಡಳಿತ ಸೌಧದ ಸಭಾಭವನದಲ್ಲಿ ನಡೆದ ಸ್ವತಂತ್ರೋತ್ಸ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಸಿ ಮಾತಾನಾಡಿದರು.
ಸ್ವತಂತ್ರೋತ್ಸ ಕಾರ್ಯಕ್ರಮವನ್ನು ಯಾವುದೇ ಲೋಪವಿಲ್ಲದೆ, ವಿಶೇಷ ಕಾಳಜಿಯಿಂದ ವಿವಿಧ ಸಮತಿಗಳು ಕಾರ್ಯನಿರ್ವಹಿಸಬೇಕು. ಪ್ರತಿವರ್ಷದಂತೆ ಈ ವರ್ಷವೂ ಸರಕಾರಿ ಕಚೇರಿ ಮತ್ತು ಪಟ್ಟಣದ ವಿವಿಧ ವೃತ್ ಗಳಲ್ಲಿ ಸ್ವಚ್ಚತೆಯೊಂದಿಗೆ ದೀಪದ ಅಲಂಕಾರಕ್ಕೆ ಕ್ರಮಕೈಗೊಳ್ಳಬೇಕು. ಕಚೇರಿ ಮತ್ತು ಶಾಲಾ ಕಾಲೇಜು ಸಿಬ್ಬಂದಿ ತಮ್ಮ ಧ್ವಜಾರೋಹಣವನ್ನು ೭:೩೦ ಒಳಗೆ ಮುಗಿಸಿಕೊಂಡು ೮:೩೦ ಘಂಟೆಗೆ ತಾಲ್ಲೂಕು ಕ್ರೀಡಾಂಗಣಕ್ಕೆ ಹಾಜರಿರಬೇಕು. ತದನಂತರ ಸಾರ್ವಜನಿಕ ಧ್ವಜಾರೋಹಣ ಜರುಗಲಿದ್ದು ಎಲ್ಲ ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ನಂತರ ಪೋಲಿಸ್ ಪಡೆ, ಹೋಮ್ ಗಾರ್ಡ,ಭಾರತ ಸೇವಾದಳಗಳಿಂದ ಪಥ ಸಂಚಲನ ಜರುಗಲಿವೆ. ಕಾರ್ಯಕ್ರಮದ ಸ್ಥಳದ ಸ್ವಚ್ಚತೆ, ಆಸನ ವ್ಯವಸ್ಥೆ, ಉಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು ಎಂದರು. ಇನ್ನೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪರಿಣಿತರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಆಡಳಿತವು ಸ್ವಾಗತ, ವೇದಿಕೆ, ಮೆರವಣಿಗೆ, ಪ್ರಶಸ್ತಿ ಪುರಸ್ಕೃತರ ಆಯ್ಕೆ, ಉಪಾಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ವಿವಿಧ ಸಮಿತಿಗಳನ್ನು ರಚಿಸಿತ್ತು. ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮಗಳು ರಾಷ್ಟ್ರದ ಅಸ್ಮಿತೆಯನ್ನು ಪ್ರತಿಬಿಂಬಿಸಬೇಕು.
ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸುವ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವಂತೆ ಎಲ್ಲಾ ಇಲಾಖೆಗಳು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಹಶಿಲ್ದಾರ ಬಿ ಎಸ್ ಕಡಕಬಾವಿ, ಮುಖಂಡ ಜಟ್ಟಪ್ಪ ರವಳಿ, ಪ್ರಶಾಂತ ಕಾಳೆ, ಡಿಎಸ್ಎಸ್ ಮುಖಂಡ ಬಾಬು ಗುಡಮಿ, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಹೊಸಮನಿ ಸೇರಿದಂತೆ ತಾಲ್ಲೂಕು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

