ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಆಧುನಿಕ ತಾಂತ್ರಿಕ ತರಬೇತಿ ಕಾರ್ಯಕ್ರಮದಡಿ ೨೦೨೫-೨೬ನೇ ಸಾಲಿಗೆ ವಿವಿಧ ವೃತ್ತಿಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ೩೫, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೪೫ ವರ್ಷ ವಯೋಮಿತಿಯುಳ್ಳ ಅರ್ಹ ಅಭ್ಯರ್ಥಿಗಳು ಜಿಲ್ಲಾ ಕೈಗಾರಿಕಾ ಕೇಂದ್ರದ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ ೫ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
