Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ & ಬಬಲೇಶ್ವರ ತಾಲೂಕುಗಳಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಪಂ ಸಿಇಓ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ತಿಕೋಟಾ & ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ ಭೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಭೋಧನೆ ಮಾಡಲು ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ರಮ ವಹಿಸಬೇಕು. ಶಾಲೆಯಲ್ಲಿನ ಕಂಪ್ಯೂಟರಗಳನ್ನು ವಿದ್ಯಾರ್ಥಿಗಳು ಜ್ಞಾನ ಅಭಿವೃದ್ಧಿಗೆ ಉಪಯೋಗಿಸುವಂತೆ ಪ್ರೇರಣೆ ನೀಡಬೇಕು ಎಂದು ಅವರು ಹೇಳಿದರು.
ಮಳೆ ಬಂದ ಸಂದರ್ಭದಲ್ಲಿ ಯಾವುದೇ ಶಾಲಾ ಆವರಣದಲ್ಲಿ ಮಳೆ ನೀರು ನೀಲದಂತೆ ಅಗತ್ಯ ಮುಂಜಾಗೃತೆ ವಹಿಸಬೇಕು. ದುರಸ್ತಿಗೊಳಿಸುವುದು ಅವಶ್ಯಕವಿದ್ದಲ್ಲಿ ಕ್ರಿಯಾಯೋಜನೆ ತಯಾರಿಸಿ, ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ನಂತರ ಕೋಟ್ಯಾಳ ಗ್ರಾ.ಪಂ. ವ್ಯಾಪ್ತಿಯ ಹರನಾಳ ಗ್ರಾಮದ ಡೋಣಿ ನದಿ ಬ್ರಿಡ್ಜ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಇತ್ತೀಚೆಗೆ ಸುರಿದ ಮಳೆ ನೀರಿನಿಂದ ಬ್ರಿಡ್ಜ್ ಮೇಲೆ ನೀರು ಹರಿಯುತ್ತಿರುವುದರಿಂದ ಅನಾನೂಕೂಲವಾಗುತ್ತಿದ್ದು, ಪ್ರಗತಿಯಲ್ಲಿರುವ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ, ರೈತರು ಮತ್ತು ಸಾರ್ವಜನಿಕರು ಓಡಾಡಲು ಮುಕ್ತ ಅವಕಾಶ ಕಲ್ಪಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋಟ್ಯಾಳ ಗ್ರಾಮದ ಹತ್ತಿರ ಇರುವ ಬ್ರಿಡ್ಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ಹೆಚ್ಚು ಮಳೆ ಬರುವ ಸಂಭವವಿರುವುದರಿಂದ ರೈತರ ಬೆಳೆ ಹಾನಿಯಾಗದಂತೆ ಅದಕ್ಕೆ ಪೂರಕವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಮತ್ತು ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತಿಕೋಟಾ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತ್ರಾಯಗೌಡ ಬಿರಾದಾರ, ಬಬಲೇಶ್ವರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಜೆ.ಎಸ್.ಪಠಾಣ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರವಿ ಪವಾರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್ . ಎಸ್. ಮ್ಯಾಗೇರಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸನಗೌಡ ಪಾಟೀಲ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ ಜನಮಟ್ಟಿ, ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರು (ಗ್ರಾ.ಉ) ಬಸವರಾಜ ಸಂಕಗೊಂಡ, ಸೆಕ್ಷನ್ ಇಂಜಿನಿಯರ್ ಪ್ರಶಾಂತ ಹೆಬ್ಬಾರೆ, ತಾಲೂಕು ಪಂಚಾಯಿತಿ ಲೆಕ್ಕಾಧಿಕಾರಿಗಳಾದ ಅನ್ವರ್ ನದಾಫ್, ಹೊನವಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೋಭಾ ಶೀಳಿನ, ತಾಜಪುರ ಹೆಚ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ ಕನಮಡಿ, ಕೋಟ್ಯಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷಕುಮಾರ ಬಿರಾದಾರ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

ಪರಿಶೀಲನೆ ನಡೆಸಿ ವರದಿ ಸಲ್ಲಿಸಿ

ತಿಕೋಟಾ ಪಟ್ಟಣದಿಂದ ತಾಜಪುರ ಹೆಚ್ ಗ್ರಾಮ ಪಂಚಾಯಿತಿಗೆ ಹೋಗುವ ರಸ್ತೆಯ ಮಧ್ಯದಲ್ಲಿ ಇರುವ ಹಳ್ಳಕ್ಕೆ ಭೇಟಿ ನೀಡಿದ ಜಿಪಂ ಸಿಇಓ ರಿಷಿ ಆನಂದ್ ಅವರು, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹದಿಂದ ಸುರಕ್ಷಿತವಾಗಿರಲು ಡಂಗುರ ಸಾರಿ

ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಶ್ಯಾಳ, ಸಾರವಾಡ ಹಾಗೂ ದದಾಮಟ್ಟಿ ಗ್ರಾಮಗಳಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ವಚ್ಚ ವಾಹಿನಿಗಳ ಮೂಲಕ & ಡಂಗುರ ಸಾರುವ ಮೂಲಕ ಪ್ರವಾಹದಿಂದ ಸುರಕ್ಷಿತವಾಗಿರಲು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಹಾಗೂ ಪ್ರವಾಹದಿಂದ ಬೆಳೆ ನಷ್ಟವಾದ ರೈತರ ಮಾಹಿತಿ ಸಂಗ್ರಹಿಸಲು ಬಬಲೇಶ್ವರ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿಗಳು ಜೆ ಎಸ್ ಪಠಾಣ್ ಅವರಿಗೆ ಸೂಚಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
  • ನಾಳೆ ಸಚಿವ ಎಂ.ಬಿ.ಪಾಟೀಲ ರಿಂದ ನೂತನ ಶಾಲಾ ಕಟ್ಟಡ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.