ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.೮೦ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಆ.೯ ರಂದು ಮಧ್ಯಾನ್ಹ ೩ ಗಂಟೆಗೆ ಬಾಗಲಕೋಟದ ಕಲಾಭವನದಲ್ಲಿ ಹಮ್ಮಿಕೊಂಡಿದೆ. ಬಸವನಬಾಗೇವಾಡಿ ತಾಲೂಕಿನಿಂದ ಆಯ್ಕೆಯಾದ ಮಕ್ಕಳು ತಮ್ಮ ಪಾಲಕರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿ ಸಂಘದ ಪ್ರತಿಭಾ ಪುರಸ್ಕಾರ ಸ್ವೀಕರಿಸಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

