ಉದಯರಶ್ಮಿ ದಿನಪತ್ರಿಕೆ
ಬಸವವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದ ಸರ್ಕಾರಿ ಉರ್ದು ಬಾಲಕರ ಪ್ರಾಥಮಿಕ ಶಾಲೆಯನ್ನು ಸರ್ಕಾರ ಉನ್ನತೀಕರಿಸಿ ಪ್ರೌಢಶಾಲೆ ಹಂತಕ್ಕೆ ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರೌಢ ಶಾಲಾ ವಿಭಾಗದ ಅಧೀನ ಕಾರ್ಯದರ್ಶಿ ಎಸ್. ಪ್ರಕಾಶ ಆದೇಶ ಹೊರಡಿಸಿದ್ದಾರೆ. ಬಸವನಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಇವರ ಪರಿಶ್ರಮದ ಫಲವಾಗಿ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೆ ಏರಿಕೆಯಾಗಿದೆ.
ಸಚಿವ ಶಿವಾನಂದ ಪಾಟೀಲ ಅವರು ತಮ್ಮೂರಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾಳಜಿ ತೋರಿದ್ದಕ್ಕೆ ಉಕ್ಕಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಸಚಿವರನ್ನು ಅಭಿನಂದಿಸಿದ್ದಾರೆ.

