ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಾಯಕತತ್ವದ ಮಹತ್ವ ಸಾರಿದ ನುಲಿಯ ಚಂದಯ್ಯನವರ ಜಯಂತ್ಯೋತ್ಸವದ ನಿಮಿತ್ತ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಪುಷ್ಪ ನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಯಕ ಶರಣರ ತತ್ವಾದರ್ಶಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿವೆ. ಶರಣರ ಕಾಯಕ ಕಲ್ಪನೆಯ ತತ್ವಾದರ್ಶಗಳನ್ನು ಅವರ ಜೀವನ ಸಂದೇಶ ಬಹುಮೂಲ್ಯ ವಿಷಯಗಳನ್ನು ಜನಸಾಮಾನ್ಯರು ತಮ್ಮ ಜೀವನಗಳಲ್ಲಿ ಅಳವಡಿಕೊಂಡು ಶರಣರು ತೋರಿದ ಮಾರ್ಗದಲ್ಲಿ ಸಾಗಬೇಕು ಎಂದು ಹೇಳಿದರು.
ಮೆರವಣಿಗೆಯ ಬಸವೇಶ್ವರ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ,ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಹೇಶ ಪೋತದಾರ, ಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ ಸೇರಿದಂತೆ ಹಲವು ಅಧಿಕಾರಿಗಳು, ಸಮಾಜದ ಗಣ್ಯ ಉಪಸ್ಥಿತರಿದ್ದರು.

