Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ
(ರಾಜ್ಯ ) ಜಿಲ್ಲೆ

ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ | ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.
ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಾಳಾಗಿರುವ ರಸ್ತೆಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಬೇಕು. ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆ ನಡೆಸಬೇಕು. ಜಿಪಿಎಸ್ ಫೋಟೋ ಬಳಸಿ ಯಾವುದೇ ರೈತರಿಂದ ದೂರು ಬರದಂತೆ ನೋಡಿಕೊಂಡು ಎಚ್ಚರಿಕೆ ವಹಿಸಬೇಕು. ಯಾವುದೇ ರೈತರಿಂದ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಜಿಲ್ಲಾಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ನಡೆಸುವಂತೆ ಅವರು ಸೂಚನೆ ನೀಡಿದರು.
ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸದಂತೆ ಎಚ್ಚರಿಕೆ ವಹಿಸಿ, ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಬಂಧಿಸಿದ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮಳೆ ಬಂದ ಸಂದರ್ಭದಲ್ಲಿ ಕಾಮಗಾರಿಗಳನ್ನು ಕೈಗೊಳ್ಳದೇ ಮುಂಚಿತವಾಗಿ ಪ್ರವಾಹಕ್ಕೊಳಗಾಗುವ ಪ್ರದೇಶಗಳನ್ನು ಗುರುತಿಸಿಕೊಂಡು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಿ ಮಾನವೀಯ ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

“ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ೧೧ ಕಿ.ಮೀ. ಕೋಟೆಗೋಡೆ ಕಂದಕ ಸಂಪೂರ್ಣ ಸರ್ವೇ ಮಾಡಿಸಿ ಈಗಾಗಲೇ ಮಾರ್ಕ್ ಮಾಡಿಸಲಾಗಿದೆ. ಮನಗೂಳಿ ಅಗಸಿಯಿಂದ ಸಿಂದಗಿ ರೇಲ್ವೆ ಸ್ಟೇಶನ್‌ವರೆಗೆ ಕೋಟೆಗೋಡೆ ಕಂದಕ ಹೂಳು ತೆಗೆಯುವುದು ಮತ್ತು ಸಮತಟ್ಟುಗೊಳಿಸಿ ನೀರನ್ನು ಸಂಪೂರ್ಣವಾಗಿ ಹೊರ ಹಾಕಲು ಈಗಾಗಲೇ ಯೋಜನೆ ರೂಪಿಸಿ ಚಾಲನೆ ನೀಡಲಾಗಿದ್ದು, ಈ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಮತ್ತೊಮ್ಮೆ ಪ್ರವಾಹ ಪರಿಸ್ತಿತಿ ಉಂಟಾಗದಂತೆ ಕ್ರಮ ವಹಿಸಿ.”

– ಎಂ.ಬಿ.ಪಾಟೀಲ
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು

“ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ರಕ್ಷಣಾ ಸಾಮಗ್ರಿಗಳಾದ ಬೋಟ್, ರೋಪ್ಸ್, ಲೈಫ್ ಜಾಕೆಟ್, ಟಾರ್ಚ ಸೇರಿದಂತೆ ಇತ್ಯಾದಿ ಸಾಮಗ್ರಿಗಳನ್ನು ತಾಲೂಕಾ ಮಟ್ಟದ ಹಾಗೂ ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತವಾಗಿಟ್ಟುಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತಾಲೂಕಾ ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸಿ ಕಾಲಕಾಲಕ್ಕೆ ಅವರಿಂದ ವರದಿ ಪಡೆದುಕೊಡು ಅಗತ್ಯ ಕ್ರಮ ವಹಿಸಲಾಗುತ್ತಿದೆ.”

– ಡಾ.ಆನಂದ್ ಕೆ
ಜಿಲ್ಲಾಧಿಕಾರಿ ವಿಜಯಪುರ

ಸಚಿವರ ಸೂಚನೆಗಳು

ವಿಜಯಪುರ ನಗರದ  ಕೆ.ಸಿ.ನಗರ, ಗಚ್ಚಿನಕಟ್ಟಿ ಕಾಲನಿ ವಾರ್ಡ ನಂ.೧೦ರಲ್ಲಿ ಮಳೆ ನೀರು ಚರಂಡಿ ನಿರ್ಮಿಸುವ ಕಾಮಗಾರಿಯನ್ನು ಕೈಗೊಂಡು ಈ ಭಾಗದಲ್ಲಿ ಪ್ರವಾಹ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. 

ವಾರ್ಡ ನಂ.೨೪ರ ಬಾಗಾಯತ್ ಗಲ್ಲಿಯಲ್ಲಿ ಅತಿಕ್ರಮಣ ತೆರವುಗೊಳಿಸಿ ಮಳೆ ಚರಂಡಿ ನಿರ್ಮಿಸುವ ಮೂಲಕ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಕ್ರಮ ವಹಿಸಬೇಕು.
ರಾಮನಗರದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಕೈಗೊಳ್ಳಲು ಒಂದು ಕೋಟಿ ರೂ. ಅವಶ್ಯಕತೆ ಇದ್ದು, ಮಹಾನಗರ ಪಾಲಿಕೆಯಿಂದ ತುರ್ತು ಅನುದಾನವನ್ನು ಬಳಸಿಕೊಂಡು ಕೂಡಲೇ ಅಗತ್ಯ ಕಾಮಗಾರಿ ಕೈಗೊಂಡು ರಾಮನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು.
ನಗರದ ಇಬ್ರಾಹಿಂರೋಜಾ ಹತ್ತಿರ ಕೋಟೆಗೋಡೆ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ವಹಿಸಬೇಕು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.