ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಮೇಸನ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಯ ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಫಲಾನುಭವಿಯ ಭಾವಚಿತ್ರ, ಸದರಿ ದಾಖಲೆಗಳನ್ನು ಆ೨೫ರೊಳಗಾಗಿ ಷರತ್ತುಗಳ ಅನ್ವಯ ಸಿಂದಗಿ ವೃತ್ತ ಕಾರ್ಮಿಕ ನಿರೀಕ್ಷಕರ ಕಛೇರಿ, ಗಣಿಹಾರ ಬಿಲ್ಡಿಂಗ್, ಅಂಬೇಡ್ಕರ್ ಸರ್ಕಲ್ ಹಿಂದುಗಡೆ, ಚಾಂದಕವಟೆ ರಸ್ತೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹತ್ತಿರ ಸಿಂದಗಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕಟ್ಟಡ ಕಾರ್ಮಿಕರಿಗೆ ತಿಳಿಸಲಾಗಿದೆ. ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು. ಕಡ್ಡಾಯವಾಗಿ ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು. ಕಾರ್ಮಿಕ ಗುರುತಿನ ಚೀಟಿ ಚಾಲ್ತಿಯಲ್ಲಿರಬೇಕು. ಕಾರ್ಮಿಕ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ವಿತರಿಸಲಾಗುವುದು. ಹಿಂದಿನ ಅವಧಿಯಲ್ಲಿ ಮೇಸನ್ ಕಿಟ್ ತೆಗೆದುಕೊಂಡವರಿಗೆ ಅವಕಾಶ ಇರುವುದಿಲ್ಲ ಎಂದು ಸಿಂದಗಿ ಕಾರ್ಮಿಕ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

