Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ
(ರಾಜ್ಯ ) ಜಿಲ್ಲೆ

ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸಲು ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾಮಾಜಿಕ ಕಳಕಳಿಯೊಂದಿಗೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಬೇಕು, ನೈರ್ಮಲ್ಯೀಕರಣ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜನರಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಡುವ ಮೂಲಕ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಅಭಿಯಾನ ಹಮ್ಮಿಕೊಳ್ಳಬೇಕು. ಆಗಾಗ ಸಭೆ ನಡೆಸಿ ಸಾರ್ವಜನಿಕರಿಗೆ ಅಗತ್ಯ ತಿಳುವಳಿಕೆ ನೀಡಬೇಕು ಎಂದು ಅವರು ತಿಳಿಸಿದರು.
ಚರಂಡಿಯ ನೀರು ಒಂದೆಡೆ ನಿಲ್ಲದೇ ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆಯೂ, ಸಮರ್ಥವಾಗಿ ಕಾರ್ಯ ನಿರ್ವಹಿಸಿ ಈ ವಿಷಯದಲ್ಲಿ ನಿರ್ಲಕ್ಷ ವಹಿಸಬಾರದು. ಸಾರ್ವಜನಿಕರ ಕಾಳಜಿಗೆ ಆದ್ಯತೆಯಾಗಿಸಿಕೊಂಡು ಕಾರ್ಯ ನಿರ್ವಹಿಸಿ, ಈ ಕುರಿತು ತಾಲೂಕ್ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತೀವ್ರ ನಿಗಾ ವಹಿಸುವಂತೆ ಅವರು ಸೂಚನೆ ನೀಡಿದರು.
ವಸತಿ ನಿಲಯಗಳಲ್ಲಿ ಸ್ವಚ್ಛತೆ, ಗುಣಮಟ್ಟ ಆಹಾರ ಹಾಗೂ ಅಗತ್ಯ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಿ, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಹೆಚ್ಚಿನ ನಿಗಾ ವಹಿಸಬೇಕು. ಈ ಕುರಿತಾಗಿ ಸಂಬಂಧಿಸಿದ ಅಧಿಕಾರಿಗಳು ವಾರಕ್ಕೆ ನಾಲ್ಕು ಬಾರಿ ವಸತಿ ನಿಲಯಕ್ಕೆ ದಿಢೀರ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಲೋಕಾಯುಕ್ತರ ಕಾರ್ಯದರ್ಶಿಗಳಾದ ಕೆ.ಶ್ರೀನಾಥ, ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನಗರ ಸ್ಚಚ್ಛತೆಗೆ ಆದ್ಯತೆ ನೀಡಿ

ಪ್ರವಾಸೋದ್ಯಮ ಉತ್ತೇಜನ ನೀಡುವ ದೃಷ್ಟಿಯಲ್ಲಿ ನಗರ ಸ್ಚಚ್ಛತೆಗೆ ಆದ್ಯತೆ ನೀಡಬೇಕು. ಈ ಹಿಂದಿಗಿಂತಲೂ ಈಗ ನಗರದ ಸ್ವಚ್ಚತೆ ಸುಧಾರಣೆಯಾಗಿದೆ. ಆದಾಗ್ಯೂ ಜನರು ಎಲ್ಲೆಂದರಲ್ಲಿ ಕಸ ಬೀಸಾಕದಂತೆ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಿ, ಹಾಗೂ ಈ ಬಗ್ಗೆ ವಾರ್ಡವಾರು ಸಭೆ ನಡೆಸಿ ಸಾರ್ವಜನಿಕರಿಗೆ ಸೂಕ್ತ ತಿಳುವಳಿಕೆ ನೀಡಿ, ಬ್ಲಾಕ್‌ಸ್ಫಾಟ್‌ಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮವಹಿಸುವಂತೆ ಸೂಚಿಸಿದ ಲೋಕಾಯುಕ್ತ ನ್ಯಾಯಮೂರ್ತಿಗಳು ರಾಜ್ಯದಲ್ಲಿಯೇ ಸ್ವಚ್ಛತಾ ನಗರವನ್ನಾಗಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಪ್ರಶಂಸೆ

ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕಾಯುಕ್ತ ಬಿ.ಎಸ್.ಪಾಟೀಲ ಅವರು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಕಾರ್ಯವೈಖರಿ ಕುರಿತು ಪ್ರಶಂಸೆ ವ್ಯಕ್ತಪಡಿಸಿ, ಪ್ರತಿದಿನ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸುವುದೂ ಸೇರಿದಂತೆ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಮತ್ತಷ್ಟು ಆದ್ಯತೆ ನೀಡಬೇಕು. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ದೃಷ್ಡಿಯಿಂದ ಗುರಿ ನಿಗದಿಪಡಿಸಿಕೊಂಡು ಮಕ್ಕಳ ಆರೋಗ್ಯ ಕಾಳಜಿ ಹೊಂದಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ೧೦೮ ಅಂಬುಲೆನ್ಸಗಳ ಸೇವೆ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ದುರಸ್ತಿ ಕಾರ್ಯಗಳನ್ನು ನಿಮ್ಮ ಹಂತದಲ್ಲಿಯೇ ನಿರ್ವಹಿಸಿಕೊಂಡು ಜನರಿಗೆ ತೊಂದರೆಯಾಗದಂತೆ ನಿಗಾವಹಿಸಬೇಕು ಎಂದು ಹೇಳಿದರು.

“ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ನಗರ ಸೌಂದರ್ಯಿಕರಣಕ್ಕಾಗಿ ಸ್ವಚ್ಚತೆ ಕಾಪಾಡಲು “ಕಸ ಕಂಡರೆ ಫೋಟೋ ಕಳಿಸಿ” ವಿಶೇಷ ಆಭಿಯಾನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲು ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ಕರೆದು, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ.”

– ಡಾ.ಆನಂದ ಕೆ
ಜಿಲ್ಲಾಧಿಕಾರಿ, ವಿಜಯಪುರ

“ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಶನಿವಾರ ಸ್ವಚ್ಛತಾ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಕ್ಷೇತ್ರ ವೀಕ್ಷಣೆ ಮಾಡುವ ಮೂಲಕ ಅಂಗನವಾಡಿ ಶಾಲಾ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಕುರಿತು ಸ್ಥಿತಿಗತಿಗಳನ್ನು ಅರಿತು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ.”

– ರಿಷಿ ಆನಂದ
ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ

ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೦೭ ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ: ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ಎಸ್‌ಎಸ್‌ಎಲ್‌ಸಿಪರೀಕ್ಷಾ ಕೇಂದ್ರಗಳಿಗೆ ಡಿಸಿ ಡಾ.ಆನಂದ ಕೆ. ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.