ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ ವತಿಯಿಂದ ೨೦೨೫-೨೬ನೇ ಸಾಲಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
೨೦೨೫ ಮೇ ೩೧ರ ಪೂರ್ವದಲ್ಲಿ ನೋಂದಾಯಿತವಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಸಹಾಯ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಕ್ಟೋಬರ್ ೩೧ರೊಳಗಾಗಿ https://ssp.karnataka.gov.inವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಜಯಪುರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
