ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೀನುಗಾರಿಕೆ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡಚಣ, ಇಂಡಿ, ದೇವರಹಿಪ್ಪರಗಿ, ಆಲಮೇಲ ತಾಲೂಕಿನ ರೈತರು ಆಗಸ್ಟ್ ೨೦ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲೆ ಸಂಖ್ಯೆ: ೯೮೪೫೯೨೭೧೧೦ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.