ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೆಂಗಳೂರಿನ ಕೊಡತಿ ಗ್ರಾಮದ ಸರ್ವೆ ನಂಬರ್ ೮೨ರಲ್ಲಿ ೭ ಎಕರೆ ಜಮೀನಿನಲ್ಲಿ ಮೀಸಲಿರುವ ೧೭ ನಿವೇಶನಗಳಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕರ್ನಾಟಕ ಮೂಲದ ಅರ್ಹ ನಿವೇಶನ ರಹಿತ ಸೈನಿಕರು/ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.