ಜಿ.ಪಿ ಪೋರವಾಲ ಕಲಾ ವಾಣಿಜ್ಯ ಮತ್ತು ವಿ.ವಿ ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ “ನಶಾ ಮುಕ್ತ ಭಾರತದ ಅಭಿಯಾನ” ಅಡಿಯಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ದೈಹಿಕ ನಿರ್ದೇಶಕರಾದ ಡಾ. ರವಿ ಗೋಲಾ ಮುಖ್ಯ ಅತಿಥಿಯಾಗಿ ಮಾತನಾಡಿ, ನಶಾ ಮುಕ್ತ ಭಾರತದ ಅಭಿಯಾನದಡಿಯಲ್ಲಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳನ್ನು ತ್ಯಜಿಸಲು ಮತ್ತು ಇತರರನ್ನು ಮಾದಕ ದ್ರವ್ಯಗಳಿಂದ ದೂರವಿರಲು ಪ್ರೋತ್ಸಾಹಿಸಲು, ಕುಟುಂಬ, ಸ್ನೇಹಿತರು ಮತ್ತು ಸಮಾಜವನ್ನು ಮಾದಕ ದ್ರವ್ಯ ಮುಕ್ತ ಮಾಡಲು ಕೈಲಾದಷ್ಟು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಘಟಕ ೧ ಕಾರ್ಯಕ್ರಮ ಅಧಿಕಾರಿ ಡಾ. ಶ್ರೀಕಾಂತ್ ಎಲ್. ಪಾಟೀಲ್ ಪ್ರತಿಜ್ಞಾವಿಧಿ ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಡಿ.ಎಂ. ಪಾಟೀಲ್, ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಪ್ರೊ. ಬಸವರಾಜ್ ಮಹಾಜನ್ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ೨ ಕಾರ್ಯಕ್ರಮ ಅಧಿಕಾರಿ ಪ್ರೊ. ವಿ.ಎ ಪಾಂಡೆ ವೇದಿಕೆ ಮೇಲಿದ್ದರು.
ಡಾ. ಶ್ರೀಕಾಂತ್ ಎಲ್ ಪಾಟೀಲ್ ನಿರೂಪಿಸಿದರು.