ಪಿಯುಸಿ ಮೊದಲ ವರ್ಷದ ವಿಜ್ಞಾನ ವಿಷಯ ಪ್ರವೇಶ ಆರಂಭ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಖಾಲಿ ಉಳಿದಿರುವ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ನೇರ ಪ್ರವೇಶಕ್ಕಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೨೦ ಕೊನೆಯ ದಿನವಾಗಿದೆ.
ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ವಿದ್ಯಾಲಯಕ್ಕೆ ಆಗಮಿಸಿ,೧೦ನೇ ತರಗತಿಯ ಅಂಕಪಟ್ಟಿ,ಆಧಾರ್ ಕಾರ್ಡ್ ಮತ್ತು ಪೋಟೋ ಸಹಿತ ಬೆಳಿಗ್ಗೆ ೧೦ ರಿಂದ ಸಂಜೆ ೦೫ರವರೆಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.