Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»’ರಾಜಣ್ಣ ವಜಾ’ ಪಕ್ಷದ ಆಂತರಿಕ ವಿಚಾರ :ಸಿಎಂ
(ರಾಜ್ಯ ) ಜಿಲ್ಲೆ

’ರಾಜಣ್ಣ ವಜಾ’ ಪಕ್ಷದ ಆಂತರಿಕ ವಿಚಾರ :ಸಿಎಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ ನೀವು ಉತ್ತರ ಕೊಟ್ಟಿದ್ದೀರಾ? | ಸ್ಪಷ್ಟನೆ ನೀಡುವ ಅಗತ್ಯವಿಲ್ಲ | ಸಿಎಂ ಸಿದ್ದರಾಮಯ್ಯ ಗುಡುಗು

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವುದು ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ಹೆಚ್ಚಿನ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.
ಗುರುವಾರ ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಕಾರಣಗಳ ಬಗ್ಗೆ ಸರಕಾರದಿಂದ ಸೂಕ್ತ ಉತ್ತರ ಬಂದಿಲ್ಲ.
ರಾಜಣ್ಣನ ವಜಾಗೊಳಿಸುವ ಮೂಲಕ ದಲಿತ ನಾಯಕನನ್ನು ತುಳಿಯಲಾಗಿದೆ. ಇದು ಕಾಂಗ್ರೆಸ್ ಸಂಸ್ಕೃತಿಯೇ? ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ‘ಒಬ್ಬರನ್ನು ತುಳಿಯುವುದು ನಿಮ್ಮ(ಬಿಜೆಪಿ) ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಅಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನು ಏಕೆ ಮಾತನಾಡುತ್ತೀರಾ? ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ, ಬಸನಗೌಡ ಪಾಟೀಲ್ ಯತ್ನಾಳ್‍ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದಾಗ ನೀವು ಉತ್ತರ ಕೊಟ್ಟಿದ್ದೀರಾ? ಇದು ಪಕ್ಷದ ಆಂತರಿಕ ವಿಚಾರ’ ಎಂದು ತಿರುಗೇಟು ನೀಡಿದರು.
ಈ ವೇಳೆ ಆಡಳಿತ-ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ಈ ವಿಷಯದ ಬಗ್ಗೆ ಸಭಾ ನಾಯಕರು ಉತ್ತರಿಸಿದ್ದಾರೆ. ಈ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ’ ಎಂದು ರೂಲಿಂಗ್ ನೀಡಿ ಗದ್ದಲಕ್ಕೆ ಕೊನೆ ಹಾಡಿದರು.

ಮಾಜಿ ಸಚಿವ ಕೆ.ಎನ್. ರಾಜಣ್ಣ ಗೆ ಬಿಜೆಪಿಗೆ ಆಹ್ವಾನ

ಬೆಂಗಳೂರು: ಸಂಪುಟದಿಂದ ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ ಪಕ್ಷ ಸೇರುವಂತೆ ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಅವರು ಆಹ್ವಾನಿಸಿದ್ದಾರೆ. ಇದೇ ವೇಳೆ ಕೆಲವು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರು ಶಾಸಕರು ರಾಜಣ್ಣ ಭೇಟಿಯಾದರು.
ಕಾಂಗ್ರೆಸ್ ಶಾಸಕರ ಗುಂಪು ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಬುಧವಾರ ರಾಜಣ್ಣ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿತು.
ಇಡೀ ಸಮುದಾಯ (ಎಸ್ಟಿ/ವಾಲ್ಮೀಕಿ) ಮತ್ತು ಅದರ ನಾಯಕರು ನಿಮ್ಮೊಂದಿಗಿದ್ದಾರೆ, ಬಿಜೆಪಿಗೆ ಬನ್ನಿ. ನೀವು ಮತ್ತು ನಿಮ್ಮ ಮಗ ಬಿಜೆಪಿಗೆ ಬನ್ನಿ. ನಾನು, ಶಿವನಗೌಡ ನಾಯಕ, ರಾಜುಗೌಡ ಮತ್ತು ನಮ್ಮ ಎಲ್ಲಾ ನಾಯಕರು, ನಾವು ನಿಮ್ಮನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ ಮತ್ತು ಪಕ್ಷದಲ್ಲಿ ನಮಗಿಂತ ಹೆಚ್ಚಿನ ಗೌರವ ನೀಡಲಿದೆ ಎಂದು ಶ್ರೀರಾಮುಲು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026

ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು

2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ

ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 06, 2026
    In ದಿನಪತ್ರಿಕೆ
  • ಕೊಪ್ಪಳ ಹನುಮಂತ ಹಳ್ಳಿಕೇರಿಗೆ ರೂ.4ಲಕ್ಷ ಪರಿಹಾರ ಮಂಜೂರು
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಎನ್.ಡಿ.ಎ ಕೈಗೆ ಅಧಿಕಾರದ ಚುಕ್ಕಾಣಿ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್‌ಎಲ್ ಅಧಿಕಾರಿ ಹಾದಿಮನಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ: ಸಂಕನಾಳ ರೈತರಿಂದ ಎಸ್‌ಎಲ್‌ಒ ಕಚೇರಿಗೆ ಮುತ್ತಿಗೆ
    In (ರಾಜ್ಯ ) ಜಿಲ್ಲೆ
  • ಕನ್ನಡದ ಉಳಿವಿಗಾಗಿ ಹೋರಾಟ ಅಗತ್ಯ :ಸಂಗೀತಾ ರಾಠೋಡ
    In (ರಾಜ್ಯ ) ಜಿಲ್ಲೆ
  • ಕನ್ನಡವೆಂದರೆ ನಮ್ಮ ಸಂಸ್ಕೃತಿಯ ಹಿರಿಮೆ :ಹೈಯ್ಯಾಳಕರ
    In (ರಾಜ್ಯ ) ಜಿಲ್ಲೆ
  • ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತನ್ನಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.