ವಿಜಯಪುರ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಥ್ರೋ ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಕ್ರೀಡಾ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಈ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪಂದ್ಯಾವಳಿಯ ಬಳಿಕ ನಡೆದ ಸಮಾರಂಭದಲ್ಲಿ ಕ್ರೀಡಾಪಟುಗಳಿಗೆ ಟ್ರೋಫಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಕ ಹನಮಂತ ಪವಾರ, ದೈಹಿಕ ಶಿಕ್ಷಕರಾದ ಯಲ್ಲಪ್ಪ ಜಂಪ್ಲಿ, ಸಮೀರ ಬೆನಕನಹಳ್ಳಿ, ನಿರ್ಣಾಯಕ ಮತ್ತು ಜಿಲ್ಲಾ ಥ್ರೋ ಬಾಲ್ ಸಂಸ್ಥೆಯ ಅಧ್ಯಕ್ಷ ಕಾಲೇಜಿನ ವಿದ್ಯಾರ್ಥಿನಿಯರಾದ ಸೌಮ್ಯ, ಪೊಜಾ, ಮೇಘಾ, ರಶ್ಮಿ, ಶೀಫಾ ಮತ್ತು ಪಾರ್ವತಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರ ಈ ಸಾಧನೆಗೆ ಬಿ.ಎಲ್.ಡಿ.ಈ ಸಂಸ್ಥೆಯ ಆಡಳಿತ ಮಂಡಳಿ, ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

