ವಿಜಯಪುರ: ಸತ್ಯ-ನಿಷ್ಟೆ-ಅಹಿಂಸೆಯನ್ನು ಬೋಧಿಸಿದ, ದೇಶ ಸೇವೆ, ಸ್ವಾತಂತ್ರ್ಯ ಹೋರಾಟ, ಹೀಗೆ ವಿವಿಧ ಕ್ಷೇತ್ರಗಳಲ್ಲಿನ ಗಾಂಧೀಜಿ ಅವರ ಕೊಡುಗೆ ಸ್ಮರಿಸುವಂಥದ್ದು ಎಂದು ಬಬಲೇಶ್ವರ ಶಾಂತವೀರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಜೆ.ಆರ್.ಹಾವಿನಾಳ ಹೇಳಿದರು.
ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಅವರ ಜಯಂತಿಯಲ್ಲಿ ಮಾತನಾಡಿದ ಅವರು, ದೇಶದ ಯುವ ಜನತೆಗೆ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸತ್ಯ, ಅಹಿಂಸೆಯನ್ನು ಬೋಧಿಸಿದ ಅವರು ದೇಶದ ಸ್ವಾತಂತ್ರ್ಯ ಹೋರಾಟಗಾರದಲ್ಲಿ ಮುಂಚೂಣಿಯಾದವರು. ಅದರಂತೆ ಲಾಲ ಬಹಾದ್ದೂರ ಶಾಸ್ತ್ರಿಯವರ ಅವರ ಸಾಹಸ ಧೈರ್ಯ ಮೆಚ್ಚುವಂಥದ್ದು. ಈ ದೇಶಕ್ಕೆ ಅವರ ಕೊಡುಗೆಯು ಅಪಾರವಾದದ್ದು.
ಇಂತಹ ಮಹಾನ್ ವ್ಯಕ್ತಿಗಳು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನೆಡೆಯಬೇಕು. ಅವರ ಆಚಾರ ವಿಚಾರಗಳನ್ನು ಯುವಜನತೆ ಅಳವಡಿಸಿಕೊಂಡು ದೇಶಸೇವೆಗೆ ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ.ಆರ್.ಎಂ.ಮಿರ್ದೆ, ಉಪ ಪ್ರಾಚಾರ್ಯ ಪ್ರೊ.ಎ.ಬಿ.ಪಾಟೀಲ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಐಕ್ಯೂಎಸಿ ನಿರ್ದೇಶಕ ಡಾ. ಪಿ.ಎಸ್.ಪಾಟೀಲ, ಡಾ.ಕೆ ಮಹೇಶಕುಮಾರ, ಡಾ.ಶ್ರೀನಿವಾಸ ದೊಡ್ಡಮನಿ, ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Related Posts
Add A Comment