Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವ ಸಂಸ್ಕ್ರತಿ ಅಭಿಯಾನ ಯಶಸ್ಸಿನ ಜವಾಬ್ದಾರಿ ನಮ್ಮೆಲ್ಲರದು
(ರಾಜ್ಯ ) ಜಿಲ್ಲೆ

ಬಸವ ಸಂಸ್ಕ್ರತಿ ಅಭಿಯಾನ ಯಶಸ್ಸಿನ ಜವಾಬ್ದಾರಿ ನಮ್ಮೆಲ್ಲರದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವ ಸಂಸ್ಕ್ರತಿ ಅಭಿಯಾನದ ಸಮಾಲೋಚನಾ ಸಭೆಯಲ್ಲಿ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಸೆ.೧ ರಿಂದ ಅ.೫ ರವರೆಗೆ ರಾಜ್ಯದ ಎಲ್ಲ ೩೨ ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವ ಬಸವ ಸಂಸ್ಕ್ರತಿ ಅಭಿಯಾನವು ಸೆ. ೧ ರಂದು ಬಸವೇಶ್ವರರ ಜನ್ಮಸ್ಥಳ ಬಸವನಬಾಗೇವಾಡಿಯಿಂದ ಸಚಿವ ಶಿವಾನಂದ ಪಾಟೀಲ ಸೇರಿದಂತೆ ನಾಡಿನ ಅನೇಕ ಶ್ರೀಗಳು ಈ ಅಭಿಯಾನದ ಬಸವ ರಥಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಅನೇಕ ಶ್ರೀಗಳು, ಜನರು ಸಾಕ್ಷಿಯಾಗಲಿದ್ದಾರೆ. ಈ ಕಾರ್ಯಕ್ರಮದ ಯಶಸ್ವಿಗೆ ರಚಿಸಲಾಗುವ ಸ್ವಾಗತ ಸಮಿತಿ ಸೇರಿದಂತೆ ವಿವಿಧ ಸಮಿತಿಗಳಲ್ಲಿರುವ ಪದಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಾದ ಜವಾಬ್ದಾರಿಯಿದೆ. ರಾಜ್ಯದಲ್ಲಿಯೇ ಅಭೂತಪೂರ್ವಕ ಕಾರ್ಯಕ್ರಮವಾಗುವಂತೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಎಲ್ಲ ರೀತಿಯ ಸಹಕಾರ ನೀಡಬೇಕೆಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಪಟ್ಟಣದ ಬಸವೇಶ್ವರ ದೇವಾಲಯ ಸಿಬಿಎಸ್ಇ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಸವ ಸಂಸ್ಕ್ರತಿ ಅಭಿಯಾನದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಬಸವ ಸಂಸ್ಕ್ರತಿ ಅಭಿಯಾನಕ್ಕೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು. ಸಮಿತಿಯಲ್ಲಿರುವ ಸದಸ್ಯರು ಎಲ್ಲರೂ ತಮಗೆ ವಹಿಸಿದ ಕಾರ್ಯವನ್ನು ಜವಾಬ್ದಾರಿಯುತವಾಗಿ ಮಾಡಬೇಕು. ಶ್ರೀಗಳ ವಾಸ್ತವ್ಯಕ್ಕೆ ಯಾತ್ರಿ ನಿವಾಸ, ಬಸವ ಭವನ, ಭಕ್ತರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗುವದು. ಅಭಿಯಾನಕ್ಕೆ ಬರುವ ಎಲ್ಲ ಜನರಿಗೆ ದಾಸೋಹ ವ್ಯವಸ್ಥೆ ಮಾಡಲಾಗುವದು. ಶ್ರೀಗಳು ತಮ್ಮ ಭಕ್ತಸಮೂಹವನ್ನು ಈ ಕಾರ್ಯಕ್ರಮಕ್ಕೆ ಕರೆದುತರಬೇಕು. ಸೆ.೨೬ ರಂದು ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ಇನ್ನೊಂದು ಸಭೆ ಇದೇ ಸ್ಥಳದಲ್ಲಿ ಸಂಜೆ ೪ ಗಂಟೆಗೆ ಮಾಡಲಾಗುವದು ಎಂದರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಬಸನಗೌಡ ಹರನಾಳ ಮಾತನಾಡಿ, ಅಭಿಯಾನದ ಬಸವ ರಥ ಯಾತ್ರೆಯ ಮೆರವಣಿಗೆಯಲ್ಲಿ ಬೀದರಿನ ಬಸವರಾಜ ದನ್ನೂರ ಅವರು ೫ ಪೂಟ್ ವಿಭೂತಿ ತರುವರು. ನಾವು ಎರಢೂವರೆ ಪೂಟ್ದ ಲಿಂಗವನ್ನು ತರುತ್ತೇವೆ. ಅಭಿಯಾನಕ್ಕೆ ಬರುವ ಎಲ್ಲ ಜನರಿಗೆ ವಿಭೂತಿ ನೀಡುತ್ತೇವೆ. ಇದರೊಂದಿಗೆ ಶ್ರೀಗಳು ರುದ್ರಾಕ್ಷಿ ನೀಡುತ್ತಾರೆ. ಈ ಕಾರ್ಯಕ್ರಮದ ಕರಪತ್ರ ಜಿಲ್ಲೆಯ ತಾಲೂಕುಗಳಿಗೆ ಕಳುಹಿಸಿಕೊಡುವ ಮೂಲಕ ಜನರನ್ನು ಆಹ್ವಾನಿಸುತ್ತೇವೆ. ಅಭಿಯಾನದ ಕಾರ್ಯಕ್ರಮದಲ್ಲಿ ವೇದಿಕೆ, ಧ್ವನಿವರ್ದಕ ಸರಿ ಇರುವಂತೆ ಸಂಘಟಕರು ಗಮನ ಹರಿಸಬೇಕು.ದಾಸೋಹ ಅಚ್ಚುಕಟ್ಟಾಗಿ ನಡೆಯುವಂತಾಗಬೇಕೆಂದರು.
ಮೋಟಗಿಯ ಪ್ರಭು ಚನ್ನಬಸವ ಸ್ವಾಮೀಜಿ ಮಾತನಾಡಿ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಮ್ಮಿಕೊಂಡಿರುವ ಬಸವ ಸಂಸ್ಕ್ರತಿ ಅಭಿಯಾನಕ್ಕೆ ಸಾಕಷ್ಟು ಊರಿನ ಜನರು ತಮ್ಮ ಊರಿನಲ್ಲಿಯೇ ಚಾಲನೆ ನೀಡುವಂತೆ ಕೋರಿದ್ದರು. ಆದರೆ ಒಕ್ಕೂಟವು ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಿಂದಲೇ ಚಾಲನೆ ನೀಡಬೇಕೆಂಬ ಆಶಯ ಹೊಂದಿದ ಫಲವಾಗಿ ಸೆ.೧ ರಂದು ಇಲ್ಲಿಂದ ಚಾಲನೆ ಸಿಗಲಿದೆ. ಇಡೀ ಜಗತ್ತು ಬಸವಣ್ಣನವರ ತತ್ವಗಳಿಗೆ ಬೆನ್ನು ಹತ್ತುವ ಕಾಲ ಸನಿಹದಲ್ಲಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ. ಸೆ.೧ ರಂದು ನಡೆಯುವ ಬಸವ ಸಂಸ್ಕ್ರತಿ ಅಭಿಯಾನ ಪರ್ವಕಾಲವಾಗಿದೆ. ಈ ಕಾರ್ಯಕ್ರಮವನ್ನು ಅಭೂತಪೂರ್ವಕವಾಗಿ ಯಶಸ್ವಿಯಾಗಲು ಅಭಿಯಾನದ ಎಲ್ಲ ಸಮಿತಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು.
ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾದೇವಿ ಗೋಕಾಕ, ಎಂ.ಜಿ.ಆದಿಗೊಂಡ ಮಾತನಾಡಿದರು.
ವೇದಿಕೆಯಲ್ಲಿ ಚನ್ನಬಸವ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಉಪಾಧ್ಯಕ್ಷ ಅಶೋಕ ಹಾರಿವಾಳ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ಸಾಹಿತಿ ಲ.ರು.ಗೊಳಸಂಗಿ, ಬಾಲಚಂದ್ರ ಮುಂಜಾನಿ,ಶಿವನಗೌಡ ಬಿರಾದಾರ ಇತರರು ಇದ್ದರು. ಎಂ.ಜಿ.ಆದಿಗೊಂಡ ಸ್ವಾಗತಿಸಿ, ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.