ವಿಜಯಪುರ ಜಿಲ್ಲೆಯ ವಸತಿ ನಿಲಯಗಳ ಕಾರ್ಯಾಚರಣೆ-ಮೇಲ್ವಿಚಾರಣೆಗೆ ಜಿಲ್ಲಾಧಿಕಾರಿಗಳಿಂದ ನೇಮಕ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಸರಕಾರಿ ವಸತಿ ನಿಲಯಗಳ ನಿರ್ವಹಣೆ, ವಿದ್ಯಾರ್ಥಿಗಳ ಕಲ್ಯಾಣ ಮೂಲಸೌಕರ್ಯಗಳ ಸುಧಾರಣೆ ಹಾಗೂ ಇತರೆ ಚಟುವಟಿಕೆಗಳನ್ನು ಹಾಗೂ ಹಾಸ್ಟೆಲ್ ಮೆಂಟರ್‌ಶಿಫ್ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಾಸ್ಟೆಲ್ ಮೆಂಟರ್‌ಗಳಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ.
ಹಾಸ್ಟೆಲ್ ಮೆಂಟರ್‌ಶಿಫ್ ಎಂಬ ವಿನೂತನ ಕಾರ್ಯಕ್ರಮಕ್ಕೆ ನೇಮಕವಾದ ಹಾಸ್ಟೆಲ್ ಮೆಂಟರ್‌ಗಳು ವಸತಿ ನಿಲಯಗಳಲ್ಲಿ ವಿದ್ಯಾರ್ಥಿಳ ಶೈಕ್ಷಣಿಕ, ವೈಯಕ್ತಿಕ ಹಾಗೂ ವೃತ್ತಿ ಜೀವನದ ಬೆಳವಣಿಗೆಗೆ ಮಾರ್ಗದರ್ಶನ ನೀಡಲು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವುದು, ಪ್ರತಿವಾರ ಕನಿಷ್ಠ ಒಂದು ಬಾರಿ ವಸತಿ ನಿಲಯಗಳಿಗೆ ಭೇಟಿ ನೀಡುವುದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೂಲಕ ಪರೀಕ್ಷಾ ಸಿದ್ಧತೆಗೆ ಮನೋಸ್ಥೈರ್ಯ ತುಂಬುವುದು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಕಲಿಕಾ ಸೌಲಭ್ಯ ಕಲ್ಪಿಸುವುದು, ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ವಸತಿ ನಿಲಯದಲ್ಲಿ ಪ್ರತಿ ತಿಂಗಳಿಗೊಮ್ಮೆ ಆರೋಗ್ಯ ಶಿಬಿರ ಏರ್ಪಡಿಸುವುದು, ಗುಣಮಟ್ಟದ ಆಹಾರ ಪೂರೈಕೆ, ಶುದ್ಧ ಕುಡಿಯುವ ನೀರು ಪೂರೈಸುವುದು, ನೀರು ಶುದ್ಧೀಕರಣ ವ್ಯವಸ್ಥೆ, ಲೈಬ್ರರಿ ಪಠ್ಯ ಸಾಮಗ್ರಿಗಳ ವ್ಯವಸ್ಥೆ ಬಗ್ಗೆ ಕ್ರಮ ವಹಿಸುವುದು, ಒಟ್ಟಾರೆ ವಿದ್ಯಾರ್ಥಿಗಳ ನಿಲಯಗಳ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವೃದ್ದಿಗೆ ಸೂಕ್ತ ಮಾರ್ಗದರ್ಶನ-ಪ್ರೊತ್ಸಾಹದೊಂದಿಗೆ ವಿನೂತನ ಕಾರ್ಯಕ್ರಮಗಳು-ಸೌಲಭ್ಯಗಳ ಮೇಲ್ವಿಚಾರಣೆ ವಹಿಸಲು ಸೂಚಿಸಲಾಗಿದೆ.
ವಿನೂತನ ಕಾರ್ಯಕ್ಕೆ ನೇಮಕವಾದ ಹಾಸ್ಟೆಲ್ ಮೆಂರ‍್ಸ್ಗಳು ಪ್ರತಿ ವಾರು ತಪ್ಪದೇ ವಹಿಸಿಕೊಟ್ಟ ವಸತಿ ನಿಲಯಕ್ಕೆ ಭೇಟಿ ನೀಡಿ, ಎಲ್ಲ ಅಗತ್ಯ ಸೌಲಭ್ಯ ಕಲ್ಪಿಸಿರುವು ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ವೈಯಕ್ತಿಕವಾಗಿ ಗಮನಹರಿಸಿ, ಈ ಕುರಿತು ವಿಡಿಯೋ ಚಿತ್ರಿಕರಣ ಮತ್ತು ಛಾಯಾಚಿತ್ರದೊಂದಿಗೆ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.