ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯ ಅವಧಿಯೂ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ ೧೦,೦೦೦ ಶಿಷ್ಯ ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. ೪೦ ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ ೨ಲಕ್ಷ ೫೦ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ ಕಾನೂನು ಪದವಿ ಪಡೆದಿರಬೇಕು.
ಆಸಕ್ತ ಅಭ್ಯರ್ಥಿಗಳು tw.kar.nic.inವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿರುವ ಅಗತ್ಯ ದಾಖಲೆಗಳನ್ನು ವಿಜಯಪುರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಅಥವಾ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.