ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಜಿಲ್ಲೆಯಲ್ಲಿ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತು ಜಂಟಿ ಸಮೀಕ್ಷೆ ನಡೆಸಿ ಹಾನಿಗೀಡಾದ ರೈತರಿಗೆ ಪರಿಹಾರ ಕೊಡಲಾಗುವುದು ಎಂದು ಜಿಲ್ಲಾಕಾರಿ ಡಾ.ಆನಂದ ಕೆ. ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಮಾಹಿತಿ ಇದ್ದು, ಕೂಡಲೇ ಸಮೀಕ್ಷೆ ಮಾಡಲು ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಕಾರಿಗಳೊಂದಿಗೆ ಜಂಟಿ ಸಮೀಕ್ಷೆ ಮಾಡಲು ಸೂಚಿಸಲಾಗಿದೆ. ಬೆಳೆ ಹಾನಿಗೀಡಾದ ರೈತರಿಗೆ ಮಾರ್ಗಸೂಚಿಯನ್ವಯ ಪರಿಹಾರ ತಂತ್ರಾಂಶ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದರು.
ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಷೇಸಲಾಗಿದೆ. ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಗೂ ಸೂಚನೆ ಕೊಟ್ಟಿದ್ದೇವೆ. ಪೊಲೀಸ್ ಇಲಾಖೆ ನಿಗಾ ವಹಿಸಿದೆ. ಬುಧವಾರ ಕೂಡ ಸಮಗ್ರವಾಗಿ ಚರ್ಚಿಸಲು ಸಭೆ ನಡೆಸಲಾಗುವುದು ಎಂದರು.
ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸುವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದರು.