ಜಿಲ್ಲಾಡಳಿತ & ಜಿಪಂ ವತಿಯಿಂದ ಗಾಂಧಿಭವನದಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ
ವಿಜಯಪುರ: ವಿಜಯಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಗಾಂಧಿಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಮಹಾತ್ಮಗಾಂಧೀಜಿ ಅವರ ೧೫೪ನೇ ಜಯಂತಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಯಂತಿ ಕಾರ್ಯಕ್ರಮವನ್ನು ಸಂಸದ ರಮೇಶ ಜಿಗಜಿಣಗಿ ಅವರು ಚರಕ ನೇಯುವ ಮೂಲಕ ಉದ್ಘಾಟಿಸಿ, ರಾಷ್ಟçಪಿತ ಮಹಾತ್ಮಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ, ಭಗವತ್ ಗೀತೆ,ಕುರಾನ್,ಬೈಬಲ್ ಜೈನ್,ಸಿಖ್ ಧರ್ಮ ಪಠಣ, ಸೇವಾದಳದವರಿಂದ ಗಾಂಧಿಜಿಯವರ ಪ್ರಿಯ ಭಜನೆ ಹಾಡಲಾಯಿತು. ಕಾರ್ಯಕ್ರಮದಲ್ಲಿ ಛದ್ಮವೇಷಧಾರಿಯಾಗಿ ಬಂದ ಮಕ್ಕಳು ಕಾರ್ಯಕ್ರಮದ ಆಕರ್ಷಣೀಯ ಕೇಂದ್ರ ಬಿಂದುವಾಗಿದ್ದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ/ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ : “ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ಟಕ್ಕಳಕಿ ಗ್ರಾಮ ಜಿ.ಎಚ್.ಎಸ್. ಶಾಲೆಯ ವಿದ್ಯಾರ್ಥಿನಿ ಬಸಮ್ಮಾ ರು.ಬಿರಾದಾರ ಪ್ರಥಮ, ವಿಜಯಪುರ ನಗರದ ಕೆ.ಪಿ.ಎಸ್. ಶಾಲೆಯ ವಿದ್ಯಾರ್ಥಿನಿ ರುಕ್ಷ್ಮೀಣಿ ಮ.ಬಿಸನಾಳ ದ್ವೀತಿಯ ಹಾಗೂ ಮುದ್ದೇಬಿಹಾಳ ತಾಲೂಕಿನ ಆಲೂರ ಗ್ರಾಮದ ಪಿ.ಎಸ್.ಪಾಟೀಲ ಸರಕಾರಿ ಪ್ರೌಢಶಾಲೆಯ ಲಕ್ಷ್ಮೀ ಸಿ.ಕೊಪ್ಪದ ಮತ್ತು ತೃತೀಯ ಸ್ಥಾನ ಪಡೆದ ವಿಜಯಪುರ ನಗರದ ಜಲನಗರದ ಜಿ.ಎಚ್.ಎಸ್. ಶಾಲೆಯ ವಿದ್ಯಾರ್ಥಿನಿ ಸಾಕ್ಷಿ ಮೂರಮಾನ ಅವರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪದವಿಪೂರ್ವ ವಿಭಾಗದಲ್ಲಿ ಬಬಲೇಶ್ವರ ತಾಲೂಕಿನ ಅರ್ಜುಣಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ ಕುಲ್ಹಳ್ಳಿ ಪ್ರಥಮ, ವಿಜಯಪುರ ನಗರದ ಸಿಕ್ಯಾಬ ಬಾಲಕರ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿನಿ ಸಾನಿಯಾ ರ.ಜಮಾದಾರ ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ವಿಜಯಪುರದ ಸೆಂಟ್ ಜೋಸೆಫ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೌಶಲ್ಯ ಯ.ಪೂಜಾರಿ ಅವರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜಯಪುರದ ಬಿ.ವ್ಹಿ.ದರಬಾರ ಕಾಲೇಜಿನ ಅಕ್ಕಮಹಾದೇವಿ ಸಿ.ಬ. ಪ್ರಥಮ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಾಂಸ್ಕೃತಿಕ ವಿಭಾಗದ ವಿದ್ಯಾರ್ಥಿ ಸ್ಪೂರ್ತಿ ಕಾಳೆ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನ ಪಡೆದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಾಂಸ್ಕೃತಿಕ ವಿಭಾಗದ ಸುಕನ್ಯಾ ಕಲ್ಲೂರಕರ್ ಅವರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಸಂಸದರಾದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವಿ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ ಸೇರಿದಂತೆ ಗಾಂಧಿ ಭವನ ಸಮಿತಿ ಸದಸ್ಯರು ವಿತರಿಸಿದರು.
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿರುವ ಪ್ರಬಂಧಗಳನ್ನು ರಾಜ್ಯ ಮಟ್ಟದ ಆಯ್ಕೆ ಸ್ಪರ್ಧೆಗೆ ಕಳುಹಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ತಿಳಿಸಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗಾಂಧಿ ಜಯಂತಿ ಅಂಗವಾಗಿ ನಗರದ ಗಾಂಧಿವೃತ್ತದಲ್ಲಿರುವ ಗಾಂಧಿ ಪ್ರತಿಮೆ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಜಯಂತಿ ಅಂಗವಾಗಿ ಸೈನಿಕ್ ಶಾಲೆ ಹತ್ತಿರವಿರುವ ಲಾಲಬಹಾದ್ದೂರ ಶಾಸ್ತ್ರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ್ ಸೌದಾಗರ್, ವಾರ್ತಾಧಿಕಾರಿ ಅಮರೇಶ ದೊಡಮನಿ, ಹುಮಾಯೂನ್ ಮಮದಾಪೂರ,ಗಾಂಧಿ ಭವನ ನಿರ್ವಹಣಾ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ವಿವಿಧ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.