ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಇಂಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂಡಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ:೧೯-೦೮-೨೦೨೫ ರಿಂದ ೦೧-೦೯-೨೦೨೫ ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.