ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ರಿಸನಂ.೩೧೬/*/೧ರಲ್ಲಿ ೧೦ಎಕರೆ ೧೮ಗುಂಟೆ ಸರ್ಕಾರಿ ಹುಲ್ಲು ಗಾವಲು ಜಮೀನನ್ನು ೨೨೦ ಕೆ.ವಿ. ವಿದ್ಯುತ್ ಉಪ ಕೇಂದ್ರ ಸ್ಥಾಪನೆ ಹಾಗೂ ವಸತಿ ಗೃಹ ನಿರ್ಮಾಣ ಮಾಡಲು ವಿಜಯಪುರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜನಿಯರಿಗೆ ಮಂಜೂರು ಮಾಡಲು ಉದ್ದೇಶಿಸಲಾಗಿದ್ದು, ಈ ಕುರಿತಾದ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆಯ ೩೦ ದಿನಗಳೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.