ಇಂಡಿ: ಸತ್ಯ ಹಾಗೂ ಅಹಿಂಸೆಯನ್ನು ಜಗತ್ತಿಗೆ ಸಾರಿದ ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ವಿಶ್ವ ಅಹಿಂಸಾ ದಿನವನ್ನಾಗಿ ಆಚರಿಸುತ್ತಿರುವುದು ಭಾರತೀಯರು ಹೆಮ್ಮ ಪಡುವ ವಿಚಾರ. ಅದಲ್ಲದೇ ಇಡೀ ಜಗತ್ತು ಮಹಾತ್ಮ ಗಾಂಧೀಜಿಯನ್ನು ಅನುಸರಿಸುತ್ತದೆ ಎಂದು ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಹೇಳಿದರು.
ಸೋಮವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹಾದ್ದೂರ ಜಯಂತಿ ಆಚರಿಸಿ ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರ ಆದರ್ಶ ತತ್ವ ಎಲ್ಲರೂ ಪರಿಪಾಲನೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರೇಡ್ ೨ ತಹಶಿಲ್ದಾರ ಧನಪಾಲ ಶೆಟ್ಟಿ , ಸಮಾಜ ಕಲ್ಯಾಣ ಅಧಿಕಾರಿ ಬಿ.ಜೆ ಇಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ, ಆರ್.ಬಿ ಮೂಗಿ, ಎಸ್.ಆರ್ ಮುಜಗೊಂಡ, ಕಂದಾಯ ನಿರೀಕ್ಷಕ ಎಚ್.ಎಚ್ ಗುನ್ನಾಪುರ, ಸಂಕೇತ ಪಾಟೀಲ, ಗ್ರಾಮ ಲೆತ್ಕಾಧಿಕಾರಿ ಪ್ರಕಾಶ ಚವಡಿಹಾಳ, ವಿರೇಶ ಜೇ ಇನ್ನೂ ಅನೇಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

