Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಶ್ವತ ಲೋಕ್ ಅದಾಲತ್ ಸದುಪಯೋಗ ಪಡೆದುಕೊಳ್ಳಿ
(ರಾಜ್ಯ ) ಜಿಲ್ಲೆ

ಶಾಶ್ವತ ಲೋಕ್ ಅದಾಲತ್ ಸದುಪಯೋಗ ಪಡೆದುಕೊಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಕರೆ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದ್ದು ಪಕ್ಷಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.
ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಶ್ವತ ಲೋಕ್ ಅದಾಲತ್ ಅನ್ನು ಪರಿಚಯಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಶಾಂತಿ ನೆಲೆಸಲಿ ಎಂಬ ಸದುದ್ದೇಶದಿಂದ ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದೆ. ಈ ಮೊದಲು ಪ್ರತೀ ಮೂರು ತಿಂಗಳಿಗೊಮ್ಮೆ ಲೋಕ್ ಅದಾಲತ್ ಹಮ್ಮಿಕೊಳ್ಳುವ ಮೂಲಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತಿದ್ದು. ಸಧ್ಯ ಶಾಶ್ವತ ಲೋಕ್ ಅದಾಲತ್ ಮೂಲಕ ಯಾವುದೇ ಸಂದರ್ಭದಲ್ಲಿಯೂ ಕೂಡ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಮುಂದಾಗಿದ್ದು ಚಾಲ್ತಿ ಇರುವ ಪ್ರಕರಣಗಳೂ ಸೇರಿದಂತೆ ಹೊಸ ವ್ಯಾಜ್ಯಗಳನ್ನೂ ಸಹ ಇಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ಪಕ್ಷಗಾರರು ಪಡೆದುಕೊಳ್ಳಬೇಕು ಎಂದರು.
ಹಿರಿಯ ವಕೀಲ ಎಸ್.ಆರ್.ಸಜ್ಜನ ವಿಶೇಶ ಉಪನ್ಯಾಸ ನೀಡಿ ಖಾಯಂ ಲೋಕ ಅದಾಲತ್ ನಲ್ಲಿ ಪ್ರಕರಣ ದಾಖಲಿಸಲು ನ್ಯಾಯಾಲಯದ ಶುಲ್ಕ ವಿಧಿಸುವ ಅವಶ್ಯಕತೆ ಇರುವದಿಲ್ಲ. ಒಂದು ವೇಳೆ ಖಾಯಂ ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಳ್ಳದಿದ್ದಲ್ಲಿ ಪ್ರಕರಣವನ್ನು ನ್ಯಾಯಾಲಯದ ಮೂಲಕ ಮುಂದುವರೆಸಲೂ ಅವಕಾಶಗಳು ಇವೆ. ಈ ಅವಕಾಶಗಳನ್ನು ಬಳಸಿಕೊಂಡು ಪಕ್ಷಗಾರರು ತಮ್ಮ ವ್ಯಾಜ್ಯಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದರು.
ನ್ಯಾಯವಾದಿಗಳ ಸಂಘದ ಅದ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ ಜನತೆಗೆ ತೀವ್ರವಾಗಿ ನ್ಯಾಯ ಒದಗಿಸುವ ಉದ್ದೇಶದಿಂದ ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ರಾಮಮೂರ್ತಿ ಎನ್, ಅಪರ್ ಸರ್ಕಾರಿ ವಕೀಲರಾದ ಎಚ್.ಎಲ್.ಸರೂರ, ಕಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ತಹಸೀಲ್ದಾರ ಕಚೇರಿಯ ಶಿರಸ್ತೇದಾರ ಎಂ.ಎ.ಬಾಗೇವಾಡಿ, ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ, ಹಿರಿಯ ನ್ಯಾಯವಾದಿಗಳಾದ ಜೆ.ಎ.ಚಿನಿವಾರ, ನ್ಯಾಯವಾದಿಗಳಾದ ರವಿ ನಾಲತವಾಡ, ಚೇತನ ಶಿವಶಿಂಪಿ, ಹಸೀನಾ ಅನಂತಪೂರ ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ದಲಾಯತ್ ಮಹಾಂತೇಶ ಹಚರೆಡ್ಡಿ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಮತ್ತು ಪಕ್ಷಗಾರರು ಭಾಗಿಯಾಗಿದ್ದರು.

“ಶಾಶ್ವತ ಲೋಕ್ ಅದಾಲತ್ ನಲ್ಲಿ ೧ಕೋಟಿ ರೂಪಾಯಿಗಳ ವರೆಗೆ ಪರಿಹಾರ ಕೊಡಿಸಲು ಅವಕಾಶಗಳಿವೆ. ವ್ಯಾಜ್ಯ ಮುಕ್ತ ದೇಶವನ್ನಾಗಿಸಲು ಸರ್ಕಾರ ಮತ್ತು ನ್ಯಾಯಾಂಗ ಇಲಾಖೆ ಸಾಕಷ್ಟು ಪ್ರಯತ್ನಿಸುತ್ತಿದ್ದು ಪಕ್ಷಗಾರರ ಸಹಭಾಗಿತ್ವ ಅವಶ್ಯವಿದೆ.”

– ರವೀಂದ್ರಕುಮಾರ ಕಟ್ಟಿಮನಿ
ಅಧ್ಯಕ್ಷರು, ತಾಲೂಕು ಕಾನೂನು ಸೇವಾ ಸಮಿತಿ, ಮುದ್ದೇಬಿಹಾಳ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೃಷ್ಟಿಯ ಮೊದಲ ದಿನವೇ ಯುಗಾದಿ

ಯುದ್ಧಗಳು ಮಾನವ ನಿರ್ಮಿತ ವಿಪತ್ತು

ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್

ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೃಷ್ಟಿಯ ಮೊದಲ ದಿನವೇ ಯುಗಾದಿ
    In ವಿಶೇಷ ಲೇಖನ
  • ಯುದ್ಧಗಳು ಮಾನವ ನಿರ್ಮಿತ ವಿಪತ್ತು
    In ವಿಶೇಷ ಲೇಖನ
  • ಧರ್ಮಸ್ಥಳ ಯೋಜನೆಯಿಂದ ನಿರ್ಗತಿಕರಿಗೆ ಆಶ್ರಯ :ನಟರಾಜ್
    In (ರಾಜ್ಯ ) ಜಿಲ್ಲೆ
  • ಪುರೋಹಿತ ವರ್ಗಕ್ಕೆ ಪ್ರತ್ಯೇಕ ಮಂಡಳಿ ರಚಿಸಲು ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತ ಪ್ರ್ಯಾಕ್ಟಿಸ್ ಮಾಡಿ :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ವಿನಾಯಕ ಪಿ.ಬಿ. ನೇಮಕ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಬದುಕಿನಲ್ಲಿ ಯುಗಾದಿ ಹಬ್ಬದ ಸಂಭ್ರಮ
    In ವಿಶೇಷ ಲೇಖನ
  • ಮುಳ್ಳಾಗದಿರಲಿ ಬದುಕಿಗೆ ಅಹಂಕಾರ
    In ವಿಶೇಷ ಲೇಖನ
  • ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆ: ಡಾ.ಸಮೃದ್ಧಿ ಗಡ್ಡದ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.