ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳಗಾರರ ಸಂಘ ಬೆಂಗಳೂರು, ವಿಜಯಪುರ ಪ್ರಾದೇಶಿಕ ಕಚೇರಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಅಗಷ್ಟ 22 ಶುಕ್ರವಾರ ರಂದು ಸನ್ 2024-25 ನೇ ಸಾಲಿನ ದ್ರಾಕ್ಷಿ ಬೆಳೆ ವಿಮೆ ಪರಿಹಾರ ಬಿಡುಗಡೆಗೊಳಿಸುವ ಕುರಿತು ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.
ಈ ದಿನದಂದು ಸಂಘದ ರಾಜ್ಯ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ, ದ್ರಾಕ್ಷಿ ಮತ್ತು ವೈನ್ ಬೋರ್ಡ್ ನಿಗಮದ ಮಾಜಿ ಅಧ್ಯಕ್ಷ ಎಂ.ಎಸ್. ರುದ್ರಗೌಡರ, ಪ್ರಗತಿಪರ ದ್ರಾಕ್ಷಿ ಬೆಳೆಗಾರರು ಹಾಗೂ ಉದ್ದಿಮೆದಾರ ಎಸ್. ಎಚ್. ನಾಡಗೌಡರು, ಎನ್.ಆರ್.ಸಿ ನಿರ್ದೇಶಕ ಸಂಜಯ ಪಾಟೀಲ್ ಕನಮಡಿ, ಪ್ರಾದೇಶಿಕ ಕಚೇರಿಯ ಅಧ್ಯಕ್ಷ ಮಲ್ಲಿಕಾರ್ಜುನ್ ಎಸ್. ಲೋಣಿ, ಪ್ರಧಾನ ಕಾರ್ಯದರ್ಶಿ ಸಿದಗೊಂಡ ರುದ್ರಗೌಡರ, ಸಂಘದ ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸುತ್ತಾರೆ. ಆದ್ದರಿಂದ ಜಿಲ್ಲೆಯ ಮತ್ತು ನೆರೆ ಜಿಲ್ಲೆಯ ಎಲ್ಲ ದ್ರಾಕ್ಷಿ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
