ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಬಸವನಬಾಗೇವಾಡಿ ಬ್ಲಾಕ್ ಅಧ್ಯಕ್ಷರಾಗಿ ಶಂಕರಗೌಡ ಬಿರಾದಾರ ಅವರನ್ನು ನೇಮಕ ಮಾಡಿ ಆದೇಶ ಪತ್ರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯದ್ಯಕ್ಷ ವಿನಯಕುಮಾರ ಸೊರಕೆ ಅವರು ನೀಡಿದರು.
ವಿಜಯಪುರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರಚಾರ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಆದೇಶ ಪತ್ರವನ್ನು ನೀಡಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಶ್ರಮಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಸರ್ಪರಾಜ ಮಿರ್ದೆ, ಬಸವನಬಾಗೇವಾಡಿ ನಗರ ಘಟಕದ ಬ್ಲಾಕ್ ಅಧ್ಯಕ್ಷ ಸುರೇಶಗೌಡ ಪಾಟೀಲ, ಫಾರುಖ್ ಹೊಕ್ರಾಣಿ ಸೇರಿದಂತೆ ಇತರರು ಇದ್ದರು.