Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರೀಶೈಲ ಪಾದಯಾತ್ರಿಗೆ ಮುಸ್ಲಿಂ ಬಾಂಧವರಿಂದ ಸನ್ಮಾನ

ಅಂತರ್ ವಿವಿ ಖೋ-ಖೋ ಪಂದ್ಯಾವಳಿಗೆ ಆಯ್ಕೆ

ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಎಂ ಸುರಕ್ಷಿತ ಮಾತೃತ್ವ ಅಭಿಯಾನ ಸಮರ್ಪಕ ಅನುಷ್ಠಾನಗೊಳಿಸಿ
(ರಾಜ್ಯ ) ಜಿಲ್ಲೆ

ಪಿಎಂ ಸುರಕ್ಷಿತ ಮಾತೃತ್ವ ಅಭಿಯಾನ ಸಮರ್ಪಕ ಅನುಷ್ಠಾನಗೊಳಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಆರೋಗ್ಯ ಅಭಿಯಾನ | ವಿಜಯಪುರ ಜಿಲ್ಲಾಧಿಕಾರಿ ಡಾ. ಕೆ.ಆನಂದ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆರೋಗ್ಯ ಸೌಕರ್ಯ ಮತ್ತು ವಿವಿಧ ಆರೋಗ್ಯ ಸೌಲಭ್ಯ ಒದಗಿಸಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ಸುರಕ್ಷತೆಗೆ ಅಗತ್ಯ ಆರೋಗ್ಯ ತಿಳುವಳಿಕೆ ಮೂಡಿಸಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸಂಬಂಧಿಸಿದವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ೧೨ ರಿಂದ ೧೪ ಬಾರಿ ನಿಯಮಿತವಾಗಿ ಕೈಗೊಳ್ಳಬೇಕು. ಅನೀಮಿಯಾ, ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆ ಒದಗಿಸಬೇಕು. ಜಿಲ್ಲೆಯಲ್ಲಿ ತಾಯಿ-ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಹೆಚ್. ಪೋರ್ಟಲ್ ಮೂಲಕ ಗರ್ಭಿಣಿ ಮಹಿಳೆಯರಿಗೆ ಕಾಲ-ಕಾಲಕ್ಕೆ ಆರೋಗ್ಯದ ಕುರಿತಾಗಿ ತಿಳುವಳಿಕೆ ನೀಡುವಂತೆ ಅವರು ಸೂಚನೆ ನೀಡಿದರು.
ಹೆರಿಗೆಯ ನಂತರ ಮಗುವಿಗೆ ಒಂದು ವರ್ಷ ತುಂಬುವವರೆಗೆ ಪಡೆದುಕೊಳ್ಳಬೇಕಾದ ಆರೋಗ್ಯ ಚಿಕಿತ್ಸೆ, ಔಷಧೋಪಚಾರ, ಲಸಿಕೆ ಸೌಲಭ್ಯಗಳ ಮಾಹಿತಿಯನ್ನು ಒದಗಿಸಬೇಕು. ಆರೋಗ್ಯ ಸೇವಾ ಸೌಲಭ್ಯಗಳ ಮಾಹಿತಿ ನೀಡಬೇಕು. ಗರ್ಭಿಣಿಯರ ಮಹಿಳೆಯರ ಅಗತ್ಯ ಮಾಹಿತಿಯನ್ನು ನಿಯಮಿತವಾಗಿ ನೋಂದಣಿ ಮಾಡಬೇಕು. ಆಶಾ ಕಾರ್ಯಕರ್ತೆಯರ ಮನೆಮನೆಗೆ ಭೇಟಿ ನೀಡಿ, ಸಕಾಲದಲ್ಲಿ ಆರೋಗ್ಯ ಸೇವೆ ನೀಡಬೇಕು. ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಿಗೆ, ತಾಲೂಕಾ ಆರೋಗ್ಯ ಅಧಿಕಾರಿಗಳಿಗೆ ಹಾಗೂ ಎಲ್ಲ ವೈದ್ಯರಿಗೆ ಸೂಚಿಸಿದರು.
ಗುಣಾತ್ಮಕ ಆರೋಗ್ಯ ಸೇವೆ, ಪ್ರಸವ ಪೂರ್ವ ಆರೈಕೆ, ಗಂಡಾಂತರ ಗರ್ಭಿಣಿ ಹೆರಿಗೆಗಳನ್ನು ಗುರುತಿಸಿ ಅವರಿಗೆ ಪ್ರಸೂತಿ ತಜ್ಞ ವೈದ್ಯರಿಂದ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ ಮೂಲಕ ಶೇ.೧೦೦ರಷ್ಟು ಹೆರಿಗೆಗಳನ್ನು ಆರೋಗ್ಯ ಸಂಸ್ಥೆಗಳಲ್ಲಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಸಭೆಗೆ ಮಾಹಿತಿ ನೀಡಿದರು.
ಸುಸಜ್ಜಿತ ಸರಕಾರಿ ಆಸ್ಪತ್ರೆಗಳ ಹಾಗೂ ಅಲ್ಲಿ ನೀಡುವ ಗುಣಮಟ್ಟದ ಆರೋಗ್ಯ ಸೇವೆಗಳು, ಪ್ರಸವ ಪೂರ್ವ ಮತ್ತು ಪ್ರಸವೋತ್ತರ ಆರೈಕೆ ಮೂಲಕ ಜಿಲ್ಲೆಯಲ್ಲಿ ತಾಯಿ-ಶಿಶು ಮರಣ ಆಗದಂತೆ ಸಹಕಾರಿಯಾಗಿದೆಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಪರಶುರಾಮ ಹಿಟ್ನಳ್ಳಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಎಸ್.ಎಲ್ ಲಕ್ಕಣ್ಣವರ, ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳು, ಮುಖ್ಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರೀಶೈಲ ಪಾದಯಾತ್ರಿಗೆ ಮುಸ್ಲಿಂ ಬಾಂಧವರಿಂದ ಸನ್ಮಾನ

ಅಂತರ್ ವಿವಿ ಖೋ-ಖೋ ಪಂದ್ಯಾವಳಿಗೆ ಆಯ್ಕೆ

ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು

ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರೀಶೈಲ ಪಾದಯಾತ್ರಿಗೆ ಮುಸ್ಲಿಂ ಬಾಂಧವರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಅಂತರ್ ವಿವಿ ಖೋ-ಖೋ ಪಂದ್ಯಾವಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಗೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರು
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಸುಸೂತ್ರ ಪರೀಕ್ಷೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು
    In (ರಾಜ್ಯ ) ಜಿಲ್ಲೆ
  • ಶೀಘ್ರದಲ್ಲೇ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿ ರುದ್ರಮ್ಮ ಗೆ ವೀರಗಣಾಚಾರಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.