ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಳಹರಿವಿಗೆ ಅನುಗುಣವಾಗಿ ಜಲಾಶಯದಿಂದ ನದಿ ಪಾತ್ರಕ್ಕೆ ನೀರು ಹರಿಬಿಡಲಾಗುತ್ತಿದೆ. ಆದ್ದರಿಂದ ನದಿ ಪಾತ್ರದ ಗ್ರಾಮಗಳ ಜನರು ತಮ್ಮ ಜಾನುವಾರುಗಳನ್ನು ಹಾಗೂ ಕೃಷಿ ಉಪಕರಣಗಳ ಸಮೇತ ನದಿ ಪಾತ್ರದಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಕೃಷ್ಣಾ ಭಾಗ್ಯ ಜಲ ನಿಗಮದಿಂದ ಮನವಿ ಮಾಡಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.