ಸಿಂದಗಿ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ರಕ್ತದಾನ ಮಾನವನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತೀ ಮುಖ್ಯವಾಗಿದೆ ಎಂದು ಶ್ರೀಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಹೇಳಿದರು.
ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ, ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಆಶ್ರಯದಲ್ಲಿ ಸಾರಂಗಮಠದ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಜನ್ಮದಿನದ ಪ್ರಯುಕ್ತ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜ, ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಕಾಲೇಜ, ಶ್ರೀಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ವಿಜಯಪುರದ ಶ್ರೀ ಬಿ.ಎಂಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಕ್ತದಾನ ಮಾಡುವುದರಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜೊತೆಗೆ ಆತ್ಮತೃಪ್ತಿ ದೊರೆಯುತ್ತದೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.
ಈ ವೇಳೆ ಶ್ರೀಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದಾನ ಮಾಡಿದರಷ್ಟೆ ರಕ್ತದ ಉತ್ಪಾದನೆ ಸಾಧ್ಯ. ಹಾಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದು ಕರೆಕೊಟ್ಟರು.
ಈ ವೇಳೆ ಸ್ವಯಂ ಪ್ರೇರಿತರಾಗಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶಿಬಿರದಲ್ಲಿ ೮೦ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು. ಶಿಬಿರದಲ್ಲಿ ಡಾ.ವಿಜಯಕುಮಾರ ವಾರದ, ಅಶೋಕ ವಾರದ, ಚನ್ನು ವಾರದ, ಡಾ.ರವಿ ಗೋಲಾ, ಡಾ.ಶರಣಬಸವ ಜೋಗುರ, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಎಮ್.ಎಸ್.ಹೈಯಾಳಕರ, ವಿ.ಬಿ.ಪಾಟೀಲ, ಜಿ.ಎ.ನಂದಿಮಠ, ಎಮ್.ಕೆ.ಬಿರಾದಾರ, ಎಸ್.ಸಿ.ದುದ್ದಗಿ, ಹೇಮಾ ಹಿರೇಮಠ, ಮಂಗಳಾ ಈಳಗೇರ, ವಿರೇಶ ಜೋಗುರ, ಶಿವಕುಮಾರ ಜೋಗುರ, ಚನ್ನು ಕತ್ತಿ, ಭ್ಯಾಗ್ಯಶ್ರೀ ನಂದಿಮಠ, ಭೀಮಾಶಂಕರ ಅರಳಗುಂಡಗಿ, ಗವಿಸಿದ್ದಪ್ಪ ಆನೆಗುಂದಿ, ಶಿವರಾಜ ಕುಂದಗೋಳ, ಮಹಾಂತೇಶ ನೂಲಾನವರ, ಸೇರಿದಂತೆ ಆಡಳಿತ ಮಂಡಳಿ ನಿರ್ದೇಶಕರು, ವಿವಿಧ ಅಂಗ ಸಂಸ್ಥೆಗಳ ಪ್ರಾಚಾರ್ಯರು, ಪ್ರಾಧ್ಯಾಪಕರು ಸಿಬ್ಬಂದಿಗಳು, ವಿದ್ಯಾರ್ಥಿಗಳು, ವೈದ್ಯಕೀಯ ಮಹಾವಿದ್ಯಾಯದ ಸಿಬ್ಬಂದಿಗಳು ಹಾಗೂ ಶ್ರೀಮಠದ ಭಕ್ತರು ಶಿಬಿರದಲ್ಲಿ ಪಾಲ್ಗೊಂಡಿದ್ದರು.