ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಕೇಂದ್ರ ಬಸ್‌ನಿಲ್ದಾಣ ಹಿಂದುಗಡೆ ಇರುವ ಸಾತವೀರೇಶ್ವರ ಸಭಾಭವನದಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬಳಗಾನೂರ ಗ್ರಾಮದ ಶಿವಶರಣೆ ಮಂಜುಳಾ ತಾಯಿ ಅವರು ಸಿಂದಗಿ ರೊಟ್ಟಿ ಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣರ್ಥ ೧೨ನೆಯ ಮೌನಾನುಷ್ಠಾನದ ಮುಕ್ತಾಯ ಸಮಾರಂಭವನ್ನು ಆ.೨೬ರಂದು ಮಂಗಳವಾರ ಬೆಳಿಗ್ಗೆ ೯ಗಂಟೆಗೆ ಇಂಗಳೇಶ್ವರ ವಿರಕ್ತಮಠದ ವಚನ ಶಿಲಾ ಮಂಟಪದ ರುವಾರಿ ಚೆನ್ನಬಸವ ಮಹಾಸ್ವಾಮಿಗಳು ಸಾನಿಧ್ಯದಲ್ಲಿ ಮಂಗಲೋತ್ಸವ ಜರುಗಲಿದೆ.
ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಹುಬ್ಬಳ್ಳಿಯ ಶ್ರೀ ಜಗದ್ಗುರು ಮೂರುಸಾವಿರಮಠ ಮಹಾಸಂಸ್ಥಾನ, ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಡಾ.ಗುರುಸಿದ್ದ ರಾಜಯೋಗಿಂದ್ರ ಮಹಾಸ್ವಾಮಿಗಳು, ದಿವ್ಯ ಸಾನಿಧ್ಯವನ್ನು ಇಂಗಳೇಶ್ವರ ವಿರಕ್ತಮಠದ ಚೆನ್ನಬಸವ ಮಹಾಸ್ವಾಮಿಗಳು, ಸಾನಿಧ್ಯವನ್ನು ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕೊಟ್ಟೂರು ಚಾನುಕೋಟೆಮಠದ ಡಾ.ಸಿದ್ಧಲಿಂಗ ಶಿವಾಚಾರ್ಯರು, ಸುಗೂರೇಶ್ವರ ಶಿವಾಚಾರ್ಯರು, ಸಿಂದಗಿ ಸಾರಂಗಮಠ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಬಾಲಯೋಗಿ ಸಿದ್ದಲಿಂಗದೇವರು ವಹಿಸಿಕೊಳ್ಳುವರು. ಅತಿಥಿಗಳಾಗಿ ಶಾಸಕ ಅಶೋಕ ಮನಗೂಳಿ, ಅ.ಭಾ.ವಿ.ಅ.ಸಂಸ್ಥೆ ತಾಲೂಕಾ ಘಟಕದ ಅಧ್ಯಕ್ಷ ಅಶೋಕ ಗು. ವಾರದ, ಬಸವನ ಬಾಗೇವಾಡಿ ಸಹಕಾರಿ ಧುರೀಣರ ಅಧ್ಯಕ್ಷ ಶಿವನಗೌಡ ಬಿರಾದಾರ ಇರಲಿದ್ದಾರೆ ಎಂದು ಸಂಚಾಲಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.