ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಾಲಯದ ಸಿಬಿಎಸ್ಇ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಶ್ರಾವಣ ಮಾಸದಂಗವಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ, ಬಸವೇಶ್ವರ ಜಾತ್ರಾ ಉತ್ಸವ ಸಮಿತಿ ಹಾಗೂ ಬಸವೇಶ್ವರ ಸೇವಾ ಸಮಿತಿ ಸಹಯೋಗದಲ್ಲಿ ಒಂದು ತಿಂಗಳ ಕಾಲ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿಯವರಿಂದ ಹಮ್ಮಿಕೊಂಡಿದ್ದ ಬಸವ ಸಂಸ್ಕ್ರತಿ ಪ್ರವಚನದ ಮಂಗಲ ಮಹೋತ್ಸವ ಆ.೨೪ ರಂದು ಸಂಜೆ ೬ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಮಂಗಲ ಮಹೋತ್ಸವದ ದಿವ್ಯ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಸಾನಿಧ್ಯವನ್ನು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವ ಶಿವಾನಂದ ಪಾಟೀಲ, ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಅತಿಥಿಗಳಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗುರುನಾಥ ದಡ್ಡೆ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ, ಪಿಕೆಪಿಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ಬಸವೇಶ್ವರ ಸೇವಾ ಸಮಿತಿಯ ಕಾರ್ಯದರ್ಶಿ ಬಸವರಾಜ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ಸದಸ್ಯ ಅನಿಲ ಅಗರವಾಲ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ಸದಸ್ಯೆ ಮಹಾದೇವಿ ಬಿರಾದಾರ ಆಗಮಿಸುವರು ಎಂದು ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ರವಿ ರಾಠೋಡ ತಿಳಿಸಿದ್ದಾರೆ.