ಸಿಂದಗಿ: ಪಟ್ಟಣದ ಕ್ರಿಯೇಟಿವ್ ಕಿಡ್ಸ್ ಹೋಮ್‌ನ ಮಕ್ಕಳು ರಾಷ್ಟ್ರದ ನಾಯಕರ ವೇಷಧರಿಸಿ ಗಮನ ಸೆಳೆದಿದ್ದಾರೆ ಎಂದು ಚಿಕ್ಕಮಕ್ಕಳ ತಜ್ಞ, ಕಾಂಗ್ರೆಸ್ ಯುವ ಮುಖಂಡ ಡಾ.ಚನ್ನವೀರ (ಮುತ್ತು) ಮನಗೂಳಿ ಹೇಳಿದರು.
ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್‌ನಲ್ಲಿ ಸೋಮವಾರ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ರಾಷ್ಟ್ರದ ನಾಯಕರ ವೇಷ ಭೂಷಣ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ರಾಷ್ಟ್ರದ ನಾಯಕರ ವೇಷಧಾರಿ ಮಾಡುವ ಮೂಲಕ ಮಕ್ಕಳಲ್ಲಿ ದೇಶ ಪ್ರೇಮ ತುಂಬವ ಕಾರ್ಯ ಮಾಡಿದೆ. ರಾಷ್ಟ್ರದ ನಾಯಕರ ಬಗ್ಗೆ ತಿಳಿಸಿಕೊಡುವ ಮೂಲಕ ಅವರ ತತ್ವ ಆದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಂಡು ಭವ್ಯ ಭಾರತ ನಿರ್ಮಾಣದ ಕನಸು ನನಸಾಗುವಂತೆ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಶಿಕ್ಷಕ ಹ.ಮ. ಪೂಜಾರ, ಅತಿಥಿಗಳಾಗಿ ಆಗಮಿಸಿದ ಡಾ.ಸಂಗಮೇಶ ಪಾಟೀಲ, ಡಾ.ಶಿವಾನಂದ ಹೊಸಮನಿ, ಪುರಸಭೆ ಸದಸ್ಯ ಬಸವರಾಜ ಯರನಾಳ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧಿ, ಕಸ್ತೂರ ಬಾ, ಲಾಲ್ ಬಹಾದ್ದೂರ್ ಶಾಸ್ತಿç, ಜವಹರಲಾಲ್ ನೆಹರು, ಬಾಲ ಗಂಗಾಧರ ತಿಲಕ, ಶಿವಾಜಿ, ವಿ.ಡಿ. ಸಾವರಕರ, ಒನಕೆ ಒಬವ್ವ, ರಾಣಿ ಅಬ್ಬಕ್ಕ, ಝಾನ್ಸಿರಾಣಿ ಲಕ್ಷ್ಮಿಬಾಯಿ, ಕಿತ್ತೂರರಾಣಿ ಚೆನ್ನಮ್ಮ, ಅನೇಕ ರಾಷ್ಟ್ರದ ನಾಯಕರ ವೇಷ ಧರಿಸಿದ ೫೦ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಮೆಚ್ಚುಗೆ ಪಡೆದರು.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಪೂಜಾರ, ಮುಖ್ಯಗುರುಮಾತೆ ಡಾ.ಜ್ಯೋತಿ ಪೂಜಾರ, ಶಿಕ್ಷಕಿಯರಾದ ಅಶ್ವಿನಿ ಲೋಣಿ, ಮಂಗಳಾ ಬಮ್ಮಣ್ಣಿ, ಸಾಧನಾ ಇಮಡೆ, ಗೌರಿ ಪಾಟೀಲ, ಶಾಂತಾ ಮೋಸಲಗಿ, ಅಂಬಿಕಾ ಹೂಗಾರ ಸೇರಿದಂತೆ ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
ರಾಷ್ಟ್ರದ ನಾಯಕರ ವೇಷದಲ್ಲಿ ಕ್ರಿಯೇಟಿವ್ ಕಿಡ್ಸ್ ಹೋಮ್ ಮಕ್ಕಳು
Related Posts
Add A Comment

