ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ನಗರದಲ್ಲಿ ವಿವಿಧ ಕಡೆ ಮಾರಾಟ ಮಾಡುತಿದ್ದ ಗಣೇಶ ಮೂರ್ತಿಗಳನ್ನು ನಗರಸಭೆ ಅಧಿಕಾರಿಗಳು ಪರಿಶಿಲಿಸಿ ಪಿಓಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದುಕೊಂಡರು.
ಪರಿಸರಕ್ಕೆ ಹಾನಿ ಉಂಟು ಮಾಡುವ ಕಾರಣಕ್ಕೆ ಪಿಓಪಿ ಗಣಪತಿ ಮೂರ್ತಿಗಳ ಮಾರಾಟ, ಸಾಗಾಟ, ಬಳಕೆಗೆ ಸರ್ಕಾರ ನಿಷೇಧ ಹೇರಿದೆ,
ಲಾಭಕ್ಕೊಸ್ಕರ ಪಿಓಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ಪರಿಸರ ಸಹಾಯಕ ಅಭಿಯಂತರಾದ ಕುಸುಮಾ ಸೋಪಡ್ಲ ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ವಿನಾಯಕ ನಡೋನಿ, ಸಚಿನ ಹಿರೇಮಠ, ಕಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಹಡಪದ, ರಾಜಕುಮಾರ ಹೊಸೂರ ಇತರರು ಇದ್ದರು.